ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದಿಂದಲೇ ಸುಕ್ರಜ್ಜಿ ಆಸ್ಪತ್ರೆ ವೆಚ್ಚ: ಸಚಿವ ಪೂಜಾರಿ

Last Updated 10 ಮೇ 2022, 15:40 IST
ಅಕ್ಷರ ಗಾತ್ರ

ಮಂಗಳೂರು: ‘ಇಲ್ಲಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೋರಾಟಗಾರ್ತಿ ಸುಕ್ರಿ ಬೊಮ್ಮ ಗೌಡ ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ಮಾಡಿ, ನನಗೆ ಈ ವಿಷಯ ತಿಳಿಸಿದ್ದಾರೆ’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮಂಗಳವಾರ ಕೆಎಂಸಿ ಆಸ್ಪತ್ರೆ ಭೇಟಿ ನೀಡಿ, ಸುಕ್ರಜ್ಜಿ ಆರೋಗ್ಯ ವಿಚಾರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸುಕ್ರಜ್ಜಿಗೆ ಸಕಾಲದಲ್ಲಿ ಚಿಕಿತ್ಸೆ ದೊರೆತಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ವಿಶೇಷ ನಿಗಾವಹಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದರು.

ಆರೋಗ್ಯದಲ್ಲಿ ಚೇತರಿಕೆ: ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ ಸುಕ್ರಜ್ಜಿ ಅವರನ್ನು ಅಂಕೋಲಾದಿಂದ ಶನಿವಾರ ಮಂಗಳೂರಿಗೆ ಕರೆತಂದು, ಕೆಎಂಸಿಯಲ್ಲಿ ದಾಖಲಿಸಲಾಗಿತ್ತು. ಭಾನುವಾರ ಅವರಿಗೆ ನಾಲ್ಕು ಸ್ಟಂಟ್ ಅಳವಡಿಸಿದ್ದು, ಚಿಕಿತ್ಸೆಗೆ ಶೀಘ್ರ ಸ್ಪಂದಿಸಿದ ಕಾರಣ, ಸೋಮವಾರ ಸಂಜೆ ಅವರನ್ನು ಐಸಿಯುದಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಮಂಗಳವಾರ ಎಲ್ಲರೊಡನೆ ಮಾತನಾಡಿದ ಅವರು, ಆಹಾರ ಸೇವಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ವಿಶ್ವಾಸವನ್ನೂ ಸುಕ್ರಜ್ಜಿ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT