ಮಂಗಳೂರು: ಕೋವಿಡ್ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದರು.

ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಕೋವಿಡ್ ಮೊದಲ ಅಲೆ ಬಂದಾಗಲೇ ಸರ್ಕಾರ ಪಾಠ ಕಲಿಯಬೇಕಿತ್ತು. ಎರಡನೇ ಅಲೆಯಲ್ಲಿ ಸಾಕಷ್ಟು ತೊಂದರೆ ಅನುಭವಿಸಿದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಮೂರನೇ ಅಲೆಯ ಭೀತಿ ಶುರುವಾಗಿದೆ. ಸೋಂಕಿನ ಪ್ರಮಾಣ ಏರಿಕೆಯಲ್ಲಿ ರಾಜ್ಯದಲ್ಲೇ ಮಂಗಳೂರು ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಸಾಕಷ್ಟು ವೈದ್ಯಕೀಯ ಸೌಲಭ್ಯ ಇದ್ದರೂ ಸಾಂಕ್ರಾಮಿಕ ರೋಗ ನಿಯಂತ್ರಿಸಲು ಆಗಲಿಲ್ಲ’ ಎಂದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುದಿನವೇ ಬಸವರಾಜ ಬೊಮ್ಮಾಯಿ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದರು. ಆದರೆ, ಪ್ರವಾಹದಿಂದ ಸಂಕಷ್ಟಕ್ಕೊಳಗಾದ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸದೆ, ವಾಪಸಾಗಿದ್ದಾರೆ ಎಂದು ದೂರಿದರು. ಯಡಿಯೂರಪ್ಪ ಸರ್ಕಾರದ ಎರಡು ವರ್ಷದ ಸಾಧನೆಯೇ ಭ್ರಷ್ಟಾಚಾರ. ರಾಜ್ಯದಲ್ಲಿ ಎದುರಾಗಿರುವ ಕೋವಿಡ್ ತಡೆ ಲಸಿಕೆ ಕೊರತೆಯನ್ನು ಹೊಸ ಮುಖ್ಯಮಂತ್ರಿ ಆದರೂ ಬಗೆಹರಿಸಬಹುದೇ ಎಂದು ಪ್ರಶ್ನಿಸಿದರು.

ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಪಕ್ಷದ ಪ್ರಮುಖರಾದ ಶಶಿಧರ ಹೆಗ್ಡೆ, ಸದಾಶಿವ ಉಳ್ಳಾಲ್, ಎಂ.ಎಸ್. ಮುಹಮ್ಮದ್, ಶಾಲೆಟ್ ಪಿಂಟೊ, ಸದಾಶಿವ ಶೆಟ್ಟಿ, ಮಮತಾ ಗಟ್ಟಿ, ಲಾರೆನ್ಸ್ ಡಿಸೋಜ, ಜೆ. ಅಬ್ದುಲ್ ಸಲೀಂ, ರಾಜಶೇಖರ ಕೋಟ್ಯಾನ್, ಶುಭೋದಯ ಆಳ್ವ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.