ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ವಾಹನಕ್ಕೆ ಹಾನಿ: ಪ್ರಕರಣ ದಾಖಲು

Last Updated 16 ಜುಲೈ 2022, 12:35 IST
ಅಕ್ಷರ ಗಾತ್ರ

ಮಂಗಳೂರು: ಸರ್ಕಾರಿ ವಾಹನವೊಂದರ ಕನ್ನಡಿ ಪುಡಿ ಮಾಡಿ, ಕಾರಿನಲ್ಲಿದ್ದವರ ಮೇಲೆ ಹಲ್ಲೆಗೆ ಯತ್ನಿಸಿ ಅವಾಚ್ಯ ಪದಗಳಿಂದ ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿ, ದ್ವಿಚಕ್ರ ವಾಹನ ಸವಾರನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರಿನಲ್ಲಿ ನಡೆಯಲಿದ್ದ ಸಭೆಯಲ್ಲಿ ಭಾಗವಹಿಸಲು ಮೂವರು ಅಧಿಕಾರಿಗಳನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ತುಂಬೆ ಬಳಿ, ಎದುರಿನ ವಾಹನ ಬ್ರೇಕ್ ಹಾಕಿದಾಗ, ಸರ್ಕಾರಿ ಕಾರಿನ ಚಾಲಕ ಕೂಡ ಬ್ರೇಕ್ ಹಾಕಿದ್ದಾರೆ. ಈ ವೇಳೆ ಕಾರಿನ ಹಿಂದಿನಿಂದ ಬರುತ್ತಿದ್ದ ದ್ವಿಚಕ್ರ ವಾಹನ ಸವಾರ ಬ್ರೇಕ್ ಹಾಕಿದ್ದು, ಸ್ಕಿಡ್‌ ಆಗಿ ಕೆಳಗೆ ಬಿದ್ದಿದ್ದಾನೆ. ಎದ್ದು ಬಂದ ಈತ ತನ್ನ ಸ್ಕೂಟರ್‌ ಅನ್ನು ಕಾರಿಗೆ ಅಡ್ಡಲಾಗಿ ಇಟ್ಟು, ಅವಾಚ್ಯ ಪದಗಳಿಂದ ನಿಂದಿಸಿದ್ದು, ಕಾರಿನ ಕನ್ನಡಿಯನ್ನು ಪುಡಿ ಮಾಡಿದ್ದಾನೆ. ಆರೋಪಿ ಸಜಿಪನಡುವಿನ ಮಹಮ್ಮದ್ ಸಂಶುದ್ದೀನ್ (22) ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT