ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಜಿಪಿಎಲ್ ಉತ್ಸವ–2023' ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಧೋನಿ

Last Updated 8 ಜನವರಿ 2023, 11:32 IST
ಅಕ್ಷರ ಗಾತ್ರ

ಮಂಗಳೂರು: ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ 'ಜಿಪಿಎಲ್ ಉತ್ಸವ - 2023'ರ ಆಮಂತ್ರಣ ಪತ್ರಿಕೆಯನ್ನು ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿಯವರು ಇಲ್ಲಿ ಭಾನುವಾರ ಬಿಡುಗಡೆಗೊಳಿಸಿದರು.

ಫೆಬ್ರುವರಿ 10, 11, 12ರಂದು ನಗರದ ಹೊರವಲಯದ ಅಡ್ಯಾರ್‌ನ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುವ ಜಿಪಿಎಲ್ ಉತ್ಸವಕ್ಕೆ ಮಂಗಳೂರು ನಗರ ದಕ್ಷಿಣ ಶಾಸಕ ಹಾಗೂ ಜಿಪಿಎಲ್ ಉತ್ಸವದ ಸಂಘಟಕರಲ್ಲಿ ಒಬ್ಬರಾದ ವೇದವ್ಯಾಸ ಕಾಮತ್ ಅವರು ಧೋನಿಯವರನ್ನು ಆಮಂತ್ರಿಸಿದರು.

ಜಿಪಿಎಲ್ ಉತ್ಸವದ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್, ಕೊಂಚಾಡಿ ಗುರುಪ್ರಸಾದ್ ಕಾಮತ್, ಕಾನೆಂಗಾಡ್ ಗುರುಪ್ರಸಾದ್ ಕಾಮತ್ ಇದ್ದರು.

7ನೇ ವರ್ಷದ ಜಿಪಿಎಲ್ ಉತ್ಸವ–2023 ಈ ಬಾರಿಯೂ ವಿಶೇಷ ಹಬ್ಬದಂತೆ ಆಯೋಜಿಸಲಾಗುತ್ತಿದ್ದು, ಕ್ರಿಕೆಟ್ ಪಂದ್ಯಾಟಗಳೊಂದಿಗೆ ಹೆಲಿಕಾಪ್ಟರ್ ರೌಂಡ್, ಬೋಟಿಂಗ್, ಕಿಡ್ಸ್ ಝೋನ್, ಮೂರು ಮುತ್ತು ತಂಡದಿಂದ ನಾಟಕ ಪ್ರದರ್ಶನ, ಬೊಂಬೆಯಾಟ, ವಾಯ್ಸ್ ಆಫ್ ಜಿಎಸ್‌ಬಿ ಆಡಿಶನ್, ವೆರೈಟಿ ಎಂಟರ್‌ಟೇನ್‌ಮೆಂಟ್, ಫುಡ್ ಕೋರ್ಟ್ ಸಹಿತ ಹಲವಾರು ಆಕರ್ಷಣೆಗಳನ್ನು ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT