ಶನಿವಾರ, ನವೆಂಬರ್ 28, 2020
25 °C
ಸ್ಯಾಂಡ್ ಬಜಾರ್‌ ಆ್ಯಪ್‌ ಉದ್ಘಾಟನೆ

ಮರಳು ಸಾಗಣೆಗೆ ಜಿಪಿಎಸ್‌ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ 13 ಮರಳು ದಿಬ್ಬಗಳನ್ನು ತೆರವುಗೊಳಿಸಲು 80 ತಾತ್ಕಾಲಿಕ ಪರವಾನಗಿ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಈ ಮರಳು ದಿಬ್ಬಗಳನ್ನು ತೆರವುಗೊಳಿಸಲು ಬಳಸುವ ದೋಣಿಗಳಿಗೆ ಹಾಗೂ ಮರಳು ಸಾಗಣೆ ವಾಹನಗಳಿಗೆ ಕಿಯೋನಿಕ್ಸ್ ನಿಗದಿಪಡಿಸಿದ ಸಂಸ್ಥೆಯಿಂದ ಜಿಪಿಎಸ್ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಜಿಪಿಎಸ್ ಅಳವಡಿಸಿದ ಬಗ್ಗೆ ದಾಖಲೆಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಮರಳು ಸಾಗಣೆ ಮಾಡುವ ವಾಹನಗಳನ್ನು ‘ಸ್ಯಾಂಡ್ ಬಜಾರ್ ಆ್ಯಪ್’ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ಮರಳು ಸಾಗಣೆ ಮಾಡಲು ಇಚ್ಛಿಸುವ ವಾಹನಗಳ ಮಾಲೀಕರು, ತಾತ್ಕಾಲಿಕ ಪರವಾನಗಿದಾರರು ಮಲ್ಲಿಕಟ್ಟೆಯಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಮರಳು ಪೂರೈಕೆಗಾಗಿ ‘ಸ್ಯಾಂಡ್ ಬಜಾರ್ ಆ್ಯಪ್’ ಅನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಬಿಡುಗಡೆ ಮಾಡಲಾಯಿತು. ‘ಸ್ಯಾಂಡ್ ಬಜಾರ್ ಆ್ಯಪ್’ ಸಹಾಯದಿಂದ ಗ್ರಾಹಕರು, ಸಾರ್ವಜನಿಕರು ಮರಳನ್ನು ಪಡೆಯಬಹುದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.