ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಬರು ಗ್ರಾಮ ಪಂಚಾಯಿತಿ ಕಣಕ್ಕೆ: ಪ್ರಚಾರದ ತುರುಸು

ಬಂಟ್ವಾಳ: ಗ್ರಾಮ ಪಂಚಾಯಿತಿ ಚುನಾವಣೆ
Last Updated 19 ಡಿಸೆಂಬರ್ 2020, 3:51 IST
ಅಕ್ಷರ ಗಾತ್ರ

ಬಂಟ್ವಾಳ: ಗ್ರಾಮೀಣ ಭಾಗದ ಜನರಿಗೆ ಸುಲಭದಲ್ಲಿ ಕೈಗೆ ಸಿಗುವ ಸರ್ಕಾರ ಎಂದೇ ಗುರುತಿಸಿಕೊಂಡಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಭಾರಿ ಪೈಪೋಟಿ ನಡೆಯುತ್ತಿದೆ.

ಇಲ್ಲಿನ ಒಟ್ಟು 57 ಗ್ರಾಮ ಪಂಚಾಯಿತಿಗಳ 837 ಸ್ಥಾನಗಳ ಪೈಕಿ ಈಗಾಗಲೇ 15 ಮಂದಿ ಅವಿರೋಧ ಆಯ್ಕೆಯಾಗಿದ್ದಾರೆ. ಉಳಿದ 822 ಸ್ಥಾನಗಳಿಗೆ ಇದೇ 22ರಂದು ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ನೇರವಾಗಿ ಪಕ್ಷಗಳ ಚಿಹ್ನೆ ಇಲ್ಲದಿದ್ದರೂ ಪಕ್ಷ ಬೆಂಬಲಿತ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದಾರೆ. ಒಟ್ಟು 1925 ಮಂದಿ ಸ್ಪರ್ಧೆಯಲ್ಲಿದ್ದಾರೆ.

ಶಾಸಕ ರಾಜೇಶ ನಾಯ್ಕ್ ನೇತೃತ್ವದಲ್ಲಿ ಬಿಜೆಪಿಗರು ಸ್ಥಳೀಯ ಕಾರ್ಯಕರ್ತರ ಸಲಹೆ ‍ಪಡೆದು, ಬಹುತೇಕ ಹೊಸ ಮುಖಗಳನ್ನು ಕಣಕ್ಕಿಳಿಸಿ ಹೆಚ್ಚು ಸ್ಥಾನ ಗೆಲ್ಲುವ ಕನಸು ಕಾಣುತ್ತಿದ್ದಾರೆ. ಇನ್ನೊಂದೆಡೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಅರ್ಹ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಅಧಿಕಾರ ಉಳಿಸಿಕೊಳ್ಳುವ ಜತೆಗೆ ಹೆಚ್ಚು ಸ್ಥಾನ ಪಡೆಯುವ ಉತ್ಸಾಹದಲ್ಲಿದ್ದಾರೆ.

ಬಹುತೇಕ ಕಡೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ಇದೆ. ಕೆಲವೆಡೆ ಮಾತ್ರ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಈ ಬಾರಿ ಎರಡೂ ಪಕ್ಷಗಳಲ್ಲಿ ಬಹುತೇಕ ಮಂದಿ ಹೊಸ ಮತ್ತು ಯುವ ಉತ್ಸಾಹಿಗಳನ್ನು ಕಣಕ್ಕೆ ಇಳಿಸಿದ್ದು, ಕೆಲವೆಡೆ ಬಂಡಾಯ ಅಭ್ಯರ್ಥಿಗಳು ಕಣದಲ್ಲಿ ಉಳಿದು ಗಮನ ಸೆಳೆದಿದ್ದಾರೆ.

ಪ್ರಚಾರಕ್ಕೆ ಹೈಟೆಕ್ ಸ್ಪರ್ಶ

ಈ ಬಾರಿ ಬ್ಯಾನರ್, ಫ್ಲೆಕ್ಸ್, ಪತ್ರಿಕಾ ಜಾಹೀರಾತುಗಳಿಗೆ ಬದಲಾಗಿ ಅಭ್ಯರ್ಥಿಗಳು ಮನೆ ಮನೆಗೆ ಭೇಟಿ ನೀಡಿ ಮತಯಾಚನೆಯಲ್ಲಿ ತೊಡಗಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ಚಿಹ್ನೆ ಮತ್ತು ಅವರ ನಾಯಕರ ಚಿತ್ರ ಸಹಿತ ಪ್ರಚಾರ ನಡೆಸಲಾಗುತ್ತಿದೆ. ಫೇಸ್‌ಬುಕ್, ವಾಟ್ಸ್‌ಆ್ಯಪ್ ಸಂದೇಶ, ಮೊಬೈಲ್ ಕರೆಗಳ ಮೂಲಕವೂ ಮತಯಾಚನೆ ಈ ಭಾಗದಲ್ಲಿ ಜೋರಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT