ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಸಿರು ಕುಕ್ಕೆಗೆ ವಿನೂತನ ಯೋಜನೆ; ಏಕಕಾಲದಲ್ಲಿ 14 ಕಡೆ ಗಿಡ ನಾಟಿ: ಸುಳ್ಳಿ

Last Updated 12 ಜುಲೈ 2021, 4:08 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕುಮಾರಧಾರಾ ತಪ್ಪಲಿನ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ಮತ್ತಷ್ಟು ಹಸಿರುಮಯವಾಗಿಸಲು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ವಿನೂತನ ಯೋಜನೆಯನ್ನು ರೂಪಿಸಿದೆ. ಇದೇ 13ರಂದು ಏಕಕಾಲದಲ್ಲಿ 14 ಕಡೆ ವಿವಿಧ ಜಾತಿಯ ಸಸ್ಯಗಳನ್ನು ನೆಟ್ಟು ಬೆಳೆಸುವ ಬೃಹತ್ ವನ ಸಂವರ್ಧನಾ ಕಾರ್ಯಾಗಾರ ನೆರವೇರಲಿದೆ ಎಂದು ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಹೇಳಿದರು.

ಭಾನುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿವಿಧ ಜಾತಿಯ ಸುಮಾರು 2,000 ಗಿಡಗಳನ್ನು ಕ್ಷೇತ್ರದಾದ್ಯಂತ ನೆಡಲಾಗುವುದು. 14 ಕಡೆಗಳಲ್ಲಿ 14 ಗಣ್ಯರು ಗಿಡ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸುವರು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಸಚಿವ ಎಸ್.ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಸಂಜೀವ ಮಠಂದೂರು, ಹರೀಶ್ ಪೂಂಜ, ರಾಜೇಶ್ ನಾಯಕ್, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ರಾಜ್ಯ ಮುಜರಾಯಿ ಆಯುಕ್ತೆ ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್, ಸಂಘ–ಸಂಸ್ಥೆ ಪ್ರತಿನಿಧಿಗಳು ಭಾಗವಹಿಸುವರು’ ಎಂದರು.

ದೇವಳದ ಗೋಪುರದಿಂದ ಕುಮಾರಧಾರಾ ತನಕ, ಆದಿ ಸುಬ್ರಹ್ಮಣ್ಯ, ಸವಾರಿ ಮಂಟಪ, ರಸ್ತೆಯ ಇಕ್ಕೆಲಗಳಲ್ಲಿ ಸಸಿ ನೆಡಲಾಗುವುದು. ಇವುಗಳ ಪಾಲನೆ, ಪೋಷಣೆ ಮತ್ತು ರಕ್ಷಣೆಗೆ ಕುಕ್ಕೆ ದೇವಳ ಸೂಕ್ತ ವ್ಯವಸ್ಥೆ ಮಾಡಿದೆ. ಕುಕ್ಕೆ ಸುಬ್ರಹ್ಮಣ್ಯನಿಗೆ ಪ್ರಿಯವಾದ ಅನೇಕ ಗಿಡಗಳು, ಹೂವಿನ ಗಿಡಗಳು, ಔಷಧ ಸಸ್ಯಗಳನ್ನು ನಾಟಿ ಮಾಡಲಾಗುವುದು ಎಂದು ಹೇಳಿದರು.

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಪ್ರಸನ್ನ ದರ್ಬೆ, ಮನೋಹರ ರೈ, ಶೋಭಾ ಗಿರಿಧರ್, ಲೋಕೇಶ್ ಮುಂಡೋಕಜೆ, ಮಾಸ್ಟರ್ ಪ್ಲಾನ್ ಸದಸ್ಯರಾದ ಮನೋಜ್ ಸುಬ್ರಹ್ಮಣ್ಯ, ಚಂದ್ರಶೇಖರ ಮರ್ಧಾಳ, ಕಿಶೋರ್ ಕುಮಾರ್ ಕೂಜುಗೋಡು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT