ಮೂಲ್ಕಿ: ತಾಲ್ಲೂಕಿನ ಪಡುಪಣಂಬೂರು, ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ಮನೆ ಬಳಕೆ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಜನರು ಖಾಸಗಿ ಟ್ಯಾಂಕರ್ಗಳ ಮೊರೆ ಹೋಗಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಕದಿಕೆ, ಕಲ್ಲಾಡಿ, ಕೊಳುವೈಲು, ಸಸಿಹಿತ್ಲು, ಕರಿತೋಟ, ಪಾವಂಜೆ ಸೇರಿದಂತೆ ವಿವಿಧ ಭಾಗಗಳಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗದೆ ನಿವಾಸಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಈ ಹಿಂದೆ ನಡೆದ ಒಪ್ಪಂದಂತೆ ಹಳೆಯಂಗಡಿ ಪಂಚಾಯಿತಿ ವ್ಯಾಪ್ತಿಯ ಕೊಳುವೈಲು ಭಾಗಕ್ಕೆ ಪಡುಪಣಂಬೂರು ಪಂಚಾಯಿತಿ ಮೂಲಕ ನೀರು ಸರಬರಾಜು ಮಾಡಬೇಕಿತ್ತು. ಆದರೆ, ಪಡುಪಣಂಬೂರು ಭಾಗದಲ್ಲಿಯೂ ನೀರಿನ ಕೊರತೆ ಕಾಣಿಸಿಕೊಂಡಿರುವುದರಿಂದ ಕೊಳುವೈಲು ಭಾಗದ 20ಕ್ಕೂ ಅಧಿಕ ಮನೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಹಳೆಯಂಗಡಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪ್ರಮುಖ ಸರ್ಕಾರಿ ಬಾವಿಯಲ್ಲೂ ನೀರಿನ ಮಟ್ಟ ಕುಸಿದಿದೆ. ಬಿಸಿಲಿನ ತೀವ್ರತೆ ಇದೇ ರೀತಿ ಮುಂದುವರಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಆತಂಕ. ಲಭ್ಯ ಇತರ ಸರ್ಕಾರಿ, ಖಾಸಗಿ ಬಾವಿಗಳನ್ನು ಗುರುತಿಸಿ ಅಲ್ಲಿಂದ ನೀರು ಪೂರೈಸುವ ಕುರಿತು ಪಂಚಾಯಿತಿ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ಅಗತ್ಯವಿದ್ದರೆ ಖಾಸಗಿ ಬಾವಿಗಳಿಂದ ನೀರು ಖರೀದಿಸಿ ಸಾರ್ವಜನಿಕರಿಗೆ ವಿತರಿಸುವ ಸಾಧ್ಯತೆಯಿದೆ.

ಸಸಿಹಿತ್ಲು ಭಾಗದಲ್ಲಿ ವಾರದಲ್ಲಿ ಒಂದು ಅಥವಾ ಎರಡು ದಿನ ಮಾತ್ರ ನೀರು ಸರಬರಾಜು ಮಾಡಲಾಗುತ್ತಿದ್ದು, ಅದೂ ಒಂದು ಗಂಟೆ ಅವಧಿಗೆ ಸೀಮಿತವಾಗಿದೆ. ನದಿ, ಸಮುದ್ರ ತೀರ ಪ್ರದೇಶವಾಗಿರುವುದರಿಂದ ಇಲ್ಲಿನ ಬಹುತೇಕ ಖಾಸಗಿ ಬಾವಿಗಳ ನೀರು ಉಪ್ಪು ಮಿಶ್ರಿತವಾಗಿದೆ. ಕುಡಿಯಲು ಯೋಗ್ಯ ನೀರು ದೊರಕದೆ ಜನರು ಟ್ಯಾಂಕರ್ ನೀರನ್ನೇ ಆಶ್ರಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-29-2142773858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.