ಮಂಗಳೂರು: ಬಜಪೆಯಲ್ಲಿ ಹತ್ಯೆಗೊಳಗಾದ ಸುಹಾಸ್ ಶೆಟ್ಡಿ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದಲ್ಲಿ ಮೇ 12 ರಂದು ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಸುಮಾರು 500 ಜನ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ಕಲ್ಲಡ್ಕ ಪ್ರಭಾಕರ್ ಭಟ್ ಸಮಾಜದ ಸ್ವಾಸ್ತ್ಯ ಕದಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ, ಅವರ ವಿರುದ್ದ ಸೋಮವಾರ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353(2)ರ ಅಡಿ ಪ್ರಕರಣ ದಾಖಲಿಸಿಲಾಗಿದೆ.

ಈ ಪ್ರಕರಣದ ಬಗ್ಗೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
.ಸುಹಾಸ್ ಶೆಟ್ಟಿ ಹತ್ಯೆ: ದ.ಕ ಬಂದ್ಗೆ ಕರೆ ನೀಡಿದ್ದ ಶರಣ್ ಪಂಪ್ವೆಲ್ ಬಂಧನ.ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ; ಮತ್ತೆ ಮೂವರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.