ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ಕಾರ್ಯನಿರ್ವಹಿಸಿದ್ದ ಕೆಲ ಪೊಲೀಸ್ ಅಧಿಕಾರಿಗಳು ದ್ವೇಷಭಾಷಣ, ಪ್ರಚೋದನಕಾರಿ ಹೇಳಿಕೆಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಸಮಾಜಘಾತುಕ ವದಂತಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದಾರೆ. ಅದಕ್ಕೆ ಕಾರಣಗಳೇನು ಎಂಬ ಬಗ್ಗೆ ಸೂಕ್ತ ತನಿಖೆಯಾಗಬೇಕು’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.

ಈ ಕುರಿತು ಅಧಿಕಾರಿಗಳ ಹೆಸರನ್ನು ಉಲ್ಲೇಖಿಸದೆಯೇ, ಗೃಹಸಚಿವ ಜಿ.ಪರಮೇಶ್ವರ ಅವರಿಗೆ ಇದೇ 15ರಂದು ಪತ್ರ ಬರೆದಿರುವ ಯು.ಟಿ.ಖಾದರ್, ‘ದ್ವೇಷಭರಿತ ಭಾಷಣ, ಪ್ರಚೋದನಾತ್ಮಕ ಹೇಳಿಕೆ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಸಮಾಜ ಘಾತುಕ ವದಂತಿಗಳಿಂದಾಗಿ ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟಾಗಿದೆ. ಒಂದು ವೇಳೆ ಹಿಂದಿನ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಕ್ರಮ ಕೈಗೊಂಡಿದ್ದರೆ ಕರಾವಳಿಯಲ್ಲಿ ಧರ್ಮಾಧರಿತ ಕೊಲೆ ಮತ್ತು ಹಿಂಸಾಚಾರವನ್ನು ತಪ್ಪಿಸಬಹುದಾಗಿತ್ತು’ ಎಂದಿದ್ದಾರೆ.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದರೋಡೆ, ಮಾದಕ ವಸ್ತು ಸಾಗಾಟದಂತಹ ಸಮಾಜಘಾತುಕ ಕೃತ್ಯಗಳಲ್ಲಿ ನಿಷ್ಠೆಯಿಂದ, ತ್ವರಿತಗತಿಯಲ್ಲಿ ಸೂಕ್ತ ಕ್ರಮ ಕೈಗೊಂಡ ಈ ಹಿಂದಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣಗಳ ವಿರುದ್ಧ ಏಕೆ ಕ್ರಮ ಕೈಗೊಳ್ಳಲಿಲ್ಲ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಈಗಿನ ಪೊಲೀಸ್ ಅಧಿಕಾರಿಗಳು ದ್ವೇಷ ಭಾಷಣದ ವಿರುದ್ಧ ಸಮರ್ಪಕ ಹಾಗೂ ತ್ವರಿತ ಕ್ರಮ ಕೈಗೊಂಡಿದ್ದಾರೆ’ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಈ ತನಿಖೆಯಿಂದ ರಾಜ್ಯದ ಆಂತರಿಕ ಶಾಂತಿ, ಸಾಮರಸ್ಯ ಹಾಗೂ ಸಾರ್ವಜನಿಕ ನಂಬಿಕೆಯನ್ನು ಮತ್ತಷ್ಟು ಬಲಪಡಿಸಬಹುದು. ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.