ಬೆಳ್ತಂಗಡಿ (ದಕ್ಷಿಣ ಕನ್ನಡ): ತಾಲ್ಲೂಕಿನ ಇಂದಬೆಟ್ಟುವಿನಲ್ಲಿ ನಡೆದಿದ್ದ ಖಾಸಗಿ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ್ದ ಕಹೀಗೂಹ ದಾಖಲಾಗಿದ್ದ ಪ್ರಕರಣದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಬೆಳ್ತಂಗಡಿ ನ್ಯಾಯಾಲಯದಿಂದ ವಾರಂಟ್ ಜಾರಿ ಮಾಡಲಾಗಿದೆ.

ಬೆಳ್ತಂಗಡಿ ಠಾಣೆಯಲ್ಲಿ ಕಿಶೋರ್ ಕುಮಾರ್ ಎಂಬುವರು ನೀಡಿದ್ದ ದೂರಿನ ಅನ್ವಯ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 353 (2) ಅಡಿ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಬಗ್ಗೆ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆಗೆ ತಿಮರೋಡಿ ಗೈರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ತಿಮರೋಡಿ ವಿರುದ್ಧ ಗಡಿಪಾರು ಆದೇಶವನ್ನೂ ಪುತ್ತೂರು ಉಪವಿಭಾಗಾಧಿಕಾರಿ ಹೊರಡಿಸಿದ್ದಾರೆ. ತಿಮರೋಡಿ ತಲೆಮರೆಸಿಕೊಂಡಿದ್ದು, ಗಡಿಪಾರು ಆದೇಶ ಜಾರಿ ಮಾಡಲು ಪೊಲೀಸರು ಹುಡುಕುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.