ಹೆಡ್ ಕಾನ್ ಸ್ಟೆಬಲ್ ಮೇಲೆ ಹಲ್ಲೆ
ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೇಲೆ ದುಷ್ಕರ್ಮಿಯೋರ್ವ ತಲವಾರು ಬೀಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂದರ್ ಠಾಣೆಯ ಹೆಡ್ಕಾನ್ಸ್ಟೇಬಲ್ ಗಣೇಶ ಕಾಮತ್ ತಲವಾರು ಹಲ್ಲೆಗೊಳಗಾದ ಪೊಲೀಸ್. ಘಟನೆಯು ನಗರದ ರಥಬೀದಿ ಸಮೀಪದ ಚಿತ್ರಮಂದಿರವೊಂದರ ಬಳಿ ನಡೆದಿದೆ.
ಹೆಡ್ಕಾನ್ಸ್ಟೇಬಲ್ ಗಣೇಶ ಇಬ್ಬರು ಸಿಬ್ಬಂದಿ ಜೊತೆ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೋರ್ವ ಮುಖ್ಯಪೇದೆ ಗಣೇಶ ಕಾಮತ್ಗೆ ತಲವಾರಿನಿಂದ ಹಲ್ಲೆ ಗೈದಿದ್ದಾನೆ.
ಕಾಮತ್ ಅವರ ಕೈಗೆ ಬಲವಾದ ಏಟು ಬಿದ್ದಿದ್ದು, ಕೂಡಲೇ ಅವರನ್ನು ನಗರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಕುರಿತು ಸ್ಥಳಕ್ಕೆ ಮಂಗಳೂರು ಉತ್ತರ (ಬಂದರ್) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.