ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ್ಪಿನಂಗಡಿ: ನೇತ್ರ ಚಿಕಿತ್ಸಾ ಶಿಬಿರ, ಸಾಧಕರಿಗೆ ಸನ್ಮಾನ

ಉಪ್ಪಿನಂಗಡಿ ಸಹಕಾರಿ ಸಂಘದ ಅಮೃತ ಮಹೋತ್ಸವ
Last Updated 25 ಜೂನ್ 2022, 4:45 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘದ ಅಮೃತ ಮಹೋತ್ಸವದ ಪ್ರಯುಕ್ತ ವರ್ಷಪೂರ್ತಿ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಶಿಬಿರ-3 ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ಬಜತ್ತೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಜರಗಿತು.

ಬೆಳಿಗ್ಗಿನಿಂದ ಮಧ್ಯಾಹ್ನ ತನಕ ನಡೆದ ಕಾರ್ಯಕ್ರಮದಲ್ಲಿ 186 ಮಂದಿಯ ನೇತ್ರ ತಪಾಸಣೆ ನಡೆಸಲಾಯಿತು. ಈ ಪೈಕಿ 50 ಮಂದಿಗೆ ಕನ್ನಡಕ ವಿತರಣೆ, 23 ಮಂದಿಗೆ ಕ್ಯಾಟರ್ಯಾಕ್ಟ್ ಸರ್ಜರಿಗೆ ವ್ಯವಸ್ಥೆ ಮಾಡಲಾಯಿತು.

ಸಂಘದ ಅಧ್ಯಕ್ಷ ಕೆ.ವಿ.ಪ್ರಸಾದ್ ಮಾತನಾಡಿ, ‘75ನೇ ವರ್ಷದ ಸಂಭ್ರಮದಲ್ಲಿ ತಿಂಗಳಿಗೊಂದು ಕಾರ್ಯಕ್ರಮವನ್ನು ಆಡಳಿತ ಮಂಡಳಿ ಮತ್ತು ಸಂಘದ ಸದಸ್ಯರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ’ ಎಂದರು.

ಬಜತ್ತೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘ ತನ್ನ ಅಮೃತ ಮಹೋತ್ಸವದ ಸಂಭ್ರಮದಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದು ಸಂತಸ ತಂದಿದೆ. ಅಧ್ಯಕ್ಷ, ಸದಸ್ಯರ ಸಹಕಾರದಿಂದ ಸಂಸ್ಥೆ ಎತ್ತರಕ್ಕೆ ಬೆಳೆದು ನಿಂತಿದೆ ಎಂದರು.

ಸಾಧಕರಿಗೆ ಸನ್ಮಾನ: ನಾಟಿ ಪಶುವೈದ್ಯ ಪದ್ಮಗೌಡ ಬಾರಿಕೆ, ಪ್ರಗತಿಪರ ಕೃಷಿಕ ಹಾಗೂ ಜಾನಪದ ಕಲಾವಿದ ಅಣ್ಣು ಪರವ ಮೇಲೂರು ಮತ್ತು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಮಾಜಿ ಸಿಬ್ಬಂದಿ ವಿಶ್ವನಾಥ ಗೌಡ ಪಿಜಕ್ಕಳ ಅವರನ್ನು ಶಾಸಕ ಸಂಜೀವ ಮಠಂದೂರು ಸನ್ಮಾನಿಸಿದರು.

ಬಜತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ, ಉಪ್ಪಿನಂಗಡಿ ಸಹಕಾರಿ ಸಂಘದ ಮಾಜಿ ನಿರ್ದೇಶಕ ಗೋಪಾಲಕೃಷ್ಣ ನಾಯಕ್ ಪೊರೋಳಿ, ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಡಾ.ಲವೀನಾ, ಡಾ.ಪದ್ಮ ಮಾತನಾಡಿದರು.

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ನೇತ್ರಾಧಿಕಾರಿ ಡಾ.ಅನಿಲ್ ರಾಮಾನುಜನ್, ಮಾಜಿ ನಿರ್ದೇಶಕಿ ಸ್ವರ್ಣಲತಾ ಪಡಿವಾಳ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್, ಸಂಘದ ನಿರ್ದೇಶಕರಾದ ಸಚಿನ್, ರಾಮ ನಾಯ್ಕ್, ಸುಜಾತಾ ರೈ, ಜಗದೀಶ ರಾವ್ ಮಣಿಕ್ಕರ, ದಯಾನಂದ ಸರೋಳಿ, ಪುಷ್ಪರಾಜ್ ಶೆಟ್ಟಿ, ಪ್ರವೀಣ್ ಆಳ್ವ, ರವೀಂದ್ರ ದರ್ಬೆ, ಮಾಜಿ ನಿರ್ದೇಶಕ ರಾಮಚಂದ್ರ ಮಣಿಯಾಣಿ, ಸಹಸ್ರಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಂತ ಪೊರೋಳಿ, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ ಹೆಗ್ಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT