ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರೇಕೊಡಿಗೆ: ಆರೋಗ್ಯ ತಪಾಸಣಾ ಶಿಬಿರ

Published 18 ಜೂನ್ 2023, 10:58 IST
Last Updated 18 ಜೂನ್ 2023, 10:58 IST
ಅಕ್ಷರ ಗಾತ್ರ

ಕೊಪ್ಪ: ತಾಲ್ಲೂಕಿನ ಹಿರೇಕೊಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಗ್ರಾಮ ಆರೋಗ್ಯ ಅಭಿಯಾನದಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಕೂಲಿ ಕಾರ್ಮಿಕರು ಹಾಗೂ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಗ್ರಾಮ‌ ಪಂಚಾಯಿತಿ ಅಧ್ಯಕ್ಷ ಬಿ.ಎಸ್.ತ್ರಿಪುರೇಂದ್ರ ಉದ್ಘಾಟಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಧಾಕರ್ ಅವರು ಆರೋಗ್ಯ ಕಾಳಜಿ ಬಗ್ಗೆ ಜನರಿಗೆ ಮಾಹಿತಿ ನೀಡಿದರು.

ರಕ್ತದೊತ್ತಡ, ಸಕ್ಕರೆ ಕಾಯಿಲೆ, ರಕ್ತ ಹೀನತೆ, ದೇಹದ ಉಷ್ಣತೆ, ಹಿಮೋಗ್ಲೋಬಿನ್, ಮಾನಸಿಕ ಆರೋಗ್ಯ ತಪಾಸಣೆ‌ ಮಾಡಲಾಯಿತು. ನರೇಗಾ ಯೋಜನೆಯ ಮಾಹಿತಿ ಕುರಿತ ಕರಪತ್ರಗಳನ್ನು ವಿತರಿಸಲಾಯಿತು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಲಕ್ಷ್ಮೀ, ಸಮುದಾಯ ಆರೋಗ್ಯ ಅಧಿಕಾರಿ ಪ್ರವೀಣ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಜನಿ, ಪ್ರಭಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT