ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ, ಆರೋಗ್ಯ ಇಲಾಖೆ ಅಧಿಕಾರಿ ಅಮಾನತು

Last Updated 26 ನವೆಂಬರ್ 2021, 8:40 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯ ಅಧೀನದಲ್ಲಿ ಬರುವ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ರತ್ನಾಕರ್, ಕಚೇರಿಯ ವೇಳೆಯಲ್ಲೇ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ತನ್ನ ಚೇಷ್ಟೆಗಳಿಗೆ ಸಹಕರಿಸದ ಸಿಬ್ಬಂದಿಗೆ ಮಾನಸಿಕ ಚಿತ್ರಹಿಂಸೆ ನೀಡುವ ಆರೋಪ ಕೇಳಿಬಂದಿದೆ.

ಆರೋಗ್ಯ ಇಲಾಖೆಯು ಈಗಾಗಲೇ ಡಾ.ರತ್ನಾಕರ್ ಅವರನ್ನು ಅಮಾನತು ಮಾಡಿದ್ದು, ಇಲಾಖಾ ವಿಚಾರಣೆ ಆರಂಭಿಸಿದೆ.
ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಚೇರಿಯಲ್ಲಿ 9 ಮಹಿಳಾ ಸಿಬ್ಬಂದಿಗಳಿದ್ದು ಅವರೊಂದಿಗೆ ನಿತ್ಯ ಅಸಭ್ಯ ವರ್ತನೆ ಮಾಡುತ್ತಿದ್ದರು ಎನ್ನುವ ಆರೋಪಗಳು ಕೇಳಿಬಂದಿವೆ. ಡಾ.ರತ್ನಾಕರ್ ವೈದ್ಯಾಧಿಕಾರಿ ಮಾತ್ರವಲ್ಲದೆ ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿದ್ದಾರೆ.

ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಟ್ರಿಪ್ ಹೋಗುತ್ತಿದ್ದ ಡಾ.ರತ್ನಾಕರ್, ತನ್ನ ಚೆಲ್ಲಾಟಕ್ಕೆ ಸಹಕರಿಸದ ಸಿಬ್ಬಂದಿಗೆ ಟಾರ್ಚರ್ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ವೈದ್ಯನ ಕುಚೇಷ್ಟೆ ಹೊರಬರುತ್ತಿದ್ದಂತೆ ಹಿರಿಯ ಅಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT