ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಚ್ಛತೆಯಿಂದ ಆರೋಗ್ಯಕರ ಸಮಾಜ

ಉಪ್ಪಿನಂಗಡಿ ಗಾಂಧಿ ಜಯಂತಿ ಸ್ವಚ್ಛತಾ ಅಭಿಯಾನ, ವಿಶೇಷ ಗ್ರಾಮ ಸಭೆ
Last Updated 3 ಅಕ್ಟೋಬರ್ 2022, 5:20 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ಮಹಾತ್ಮ ಗಾಂಧಿ ಜನ್ಮ ದಿನಾಚರಣೆ ಮತ್ತು ಸ್ವಚ್ಛತಾ ಅಭಿಯಾನ, ಸ್ವಚ್ಛತಾ ಹೀ ಸೇವಾ ಆಂದೋಲನಾ ಮತ್ತು ಗ್ರಾಮ ನೈರ್ಮಲ್ಯ ಯೋಜನೆಯ ಕ್ರಿಯಾ ಯೋಜನೆ ತಯಾರಿ, ದೂರದೃಷ್ಟಿ ಯೋಜನೆಯ ಮಾಹಿತಿ ಕಾರ್ಯಾಗಾರ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕ್ರಿಯಾ ಯೋಜನೆ ತಯಾರಿ, ಅಮೃತ ಗ್ರಾಮ ಪಂಚಾಯಿತಿ ಯೋಜನೆಯ ಕ್ರಿಯಾ ಯೋಜನೆ, ಪ್ರಧಾನ ಮಂತ್ರಿ ಆವಾಜ್ ಯೋಜನೆಯ ಫಲಾನುಭವಿಗಳ ಆಯ್ಕೆ ಕುರಿತು ವಿಶೇಷ ಗ್ರಾಮ ಸಭೆ ಭಾನುವಾರ ಜರುಗಿತು.

ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಚಂದ್ರ ಮುಳಿಯ ಮಾತನಾಡಿ, ನಾವು ಇಂದು ಸ್ವಾವಲಂಬಿಗಳಾಗಿ ಬದುಕಲು ಮಹಾತ್ಮ ಗಾಂಧಿ ಕಾರಣ. ಅವರ ತತ್ವ ಆದರ್ಶಗಳು ನಮಗೆ ದಾರಿ ದೀಪವಾಗಿವೆ. ಗ್ರಾಮದ ಸ್ವಚ್ಛತೆ ಕಾಪಾಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ. ಪ್ರತಿಯೊಬ್ಬರು ಸ್ವಚ್ಛತೆಗೆ ಸಹಕಾರ ನೀಡಬೇಕು ಎಂದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಪ್ರಮಾಣವಚನ ಬೋಧಿಸಿದರು. ಕಚೇರಿಯಿಂದ ಹೊರಟು ಸಮುದಾಯ ಆರೋಗ್ಯ ಕೇಂದ್ರ, ಬಸ್ ನಿಲ್ದಾಣ, ಪೇಟೆಯಲ್ಲಿ ಕಸ ಹೆಕ್ಕುವ ಮೂಲಕ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಸದಸ್ಯರಾದ ಸುರೇಶ್ ಅತ್ರಮಜಲು, ಯು.ಕೆ. ಇಬ್ರಾಹಿಂ, ಮೈಸಿದಿ ಇಬ್ರಾಹಿಂ, ಅಬ್ದುಲ್ ರಶೀದ್, ವಿದ್ಯಾಲಕ್ಷ್ಮಿ ಪ್ರಭು, ವನಿತಾ, ಕಾರ್ಯದರ್ಶಿ ದಿನೇಶ್, ಆರೋಗ್ಯ ಸಹಾಯಕಿ ಗಾಯತ್ರಿ, ಆಶಾ ಕಾರ್ಯಕರ್ತರಾದ ಮಮತಾ, ಧನವತಿ, ವನಿತಾ, ಪುಷ್ಪಾ, ಸಂಘ ಸಂಸ್ಥೆ ಪದಾಧಿಕಾರಿಗಳಾದ ಕೈಲಾರ್ ರಾಜಗೋಪಾಲ ಭಟ್, ಸಿದ್ದಿಕ್ ಕೆಂಪಿ,
ಎನ್. ಉಮೇಶ್ ಶೆಣೈ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT