ಉಳ್ಳಾಲ: ಹೃದಯಾಘಾತ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮ ಹಾಗೂ ಚಿಕಿತ್ಸಾ ವಿಧಾನಗಳ ಕುರಿತು ಸಮಾಜದಲ್ಲಿ ಇನ್ನಷ್ಟು ಅರಿವನ್ನು ಬೆಳೆಸುವ ಕಾರ್ಯಗಳಾಗಬೇಕು. ಮುಖ್ಯವಾಗಿ ವಾಹನ ಚಾಲಕರಿಗೆ, ಮಾರುಕಟ್ಟೆ ಸಿಬ್ಬಂದಿ, ಇತರ ವಲಯಗಳ ಕಾರ್ಮಿಕರಿಗೂ ಇಂತಹ ತರಬೇತಿಗಳ ಮೂಲಕ ಜಾಗೃತಿ ಮೂಡಿಸಿದರೆ ಅಮೂಲ್ಯ ಜೀವಗಳ ರಕ್ಷಣೆ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಹೇಳಿದರು.

ಇಲ್ಲಿನ ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಬುಧವಾರ ನಡೆದ ವಿಶ್ವ ಹೃದಯ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಯುವಕರೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಹೃದಯಾಘಾತ ಕುರಿತಾದ ಅರಿವನ್ನು ಬೆಳೆಸಿಕೊಳ್ಳಬೇಕು. ಹೃದಯ ಇದ್ದರೆ ಸಾಲದು ಹೃದಯ ಶ್ರೀಮಂತಿಕೆಯೂ ನಮ್ಮಲ್ಲಿ ಇರಬೇಕು. ಈ ನಿಟ್ಟಿನಲ್ಲಿ ಬಡವರಿಗೆ ಉಚಿತವಾಗಿ ಹೃದಯ ಸಂಬಂಧಿ ಚಿಕಿತ್ಸೆ ಸೇರಿದಂತೆ ಅನೇಕ ರೀತಿಯ ಆರೋಗ್ಯ ಸೇವೆಯನ್ನು ಒದಗಿಸಿಕೊಡುತ್ತಿರುವ ಯೆನೆಪೋಯ ಮೆಡಿಕಲ್ ಕಾಲೇಜಿನ ಕಾರ್ಯ ಶ್ಲಾಘನೀಯ ಎಂದರು.

ಯೆನೆಪೋಯ ಪರಿಗಣಿತ ವಿವಿಯ ಕುಲಪತಿ ಪ್ರೊ.ಡಾ.ವಿಜಯ ಕುಮಾರ್ ಮಾತನಾಡಿ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯು ಕಳೆದ ಹಲವಾರು ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆ ಸೇರಿದಂತೆ ಜನರ ಆರೋಗ್ಯ ಸೇವೆಯನ್ನು ನಿರ್ವಹಿಸುತ್ತಾ ಸಮಾಜಪರ ಕಾಳಜಿಯೊಂದಿಗೆ ಮುನ್ನಡೆಯುತ್ತಿದೆ. ಇಲ್ಲಿಯವರಿಗೆ 13,000 ಕ್ಕೂ ಹೆಚ್ಚು ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆಯ ಮೂಲಕ ಆಸ್ಪತ್ರೆಯು ಸಾಧನೆ ಮಾಡಿದೆ ಎಂದರು.

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ನವೀನ್ ಚಂದ್ರ ಕುಲಾಲ್, ಮೆಡಿಕಲ್ ಕಾಲೇಜಿನ ಮೆಡಿಕಲ್ ಸೂಪರಿಡೆಂಟ್ ಡಾ.ಹಬೀಬ್ ರಹಿಮಾನ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಯನೆಪೋಯ ಪರಿಗಣಿತ ವಿವಿ ಕುಲಸಚಿವ ಡಾ.ಕೆ.ಎಸ್.ಗಂಗಾಧರ ಸೋಮಯಾಜಿ, ಪ್ರಾಂಶುಪಾಲ ಡಾ.ಎಂ.ಎಸ್.ಮೂಸಬ್ಬ, ಉಪಪ್ರಾಂಶುಪಾಲ ಡಾ. ಪ್ರಕಾಶ್ ಸಲ್ದಾನ, ಯೆನೆಪೋಯ ಮೆಡಿಕಲ್ ಕಾಲೇಜಿನ ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ಪ್ರಶಾಂತ್ ಆರ್.ಎಂ. ಮೊದಲಾದವರು ಉಪಸ್ಥಿತರಿದ್ದರು.

ಯನೆಪೋಯ ಮೆಡಿಕಲ್ ಕಾಲೇಜಿನ ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೆಡಿಸಿನ್ ವಿಭಾಗದ ಡೀನ್ ಡಾ.ಅಭಯ್ ನಿರ್ಗುಡೆ ಸ್ವಾಗತಿಸಿದರು. ಸಹಾಯಕ ವೈದ್ಯಕೀಯ ಅಧೀಕ್ಷಕ ಡಾ.ಮುಖ್ತಾರ್ ಅಬ್ದುಲ್ಲಾ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.