ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸುಬ್ರಹ್ಮಣ್ಯ: ಧಾರಾಕಾರ ಮಳೆ

Published 30 ಮೇ 2024, 15:45 IST
Last Updated 30 ಮೇ 2024, 15:45 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರ ಮಳೆಯಾಗಿದೆ.

‌ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಬಿಸಿಲಿನ ವಾತಾವರಣ ಇತ್ತು. ಸುಬ್ರಹ್ಮಣ್ಯ-ಗುತ್ತಿಗಾರು-ಸುಳ್ಯ ರಸ್ತೆ ಹಾಗೂ ಸುಬ್ರಹ್ಮಣ್ಯ-ಪಂಜ-ಬೆಳ್ಳಾರೆ ರಸ್ತೆಯ ಹಲವೆಡೆ ಅಸಮರ್ಪಕ ಚರಂಡಿಯಿಂದಾಗಿ ಮಳೆ ನೀರು ರಸ್ತೆಯಲ್ಲೇ ಹರಿದಿದ್ದರಿಂದ ವಾಹನ ಸವಾರರು ಸಮಸ್ಯೆ ಅನುಭವಿಸಿದರು.

ಸುಬ್ರಹ್ಮಣ್ಯ, ಬಿಳಿನೆಲೆ, ಯೇನೆಕಲ್ಲು, ಬಳ್ಪ, ಪಂಜ, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಗುತ್ತಿಗಾರು, ನಡುಗಲ್ಲು, ಎಲಿಮಲೆ, ಸಂಪಾಜೆ ಭಾಗದಲ್ಲೂ ಉತ್ತಮ ಮಳೆಯಾಗಿದೆ. ಸುಬ್ರಹ್ಮಣ್ಯ, ಆದಿ ಸುಬ್ರಹ್ಮಣ್ಯದ ಬಳಿ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ. ನೀರು ತುಂಬಿದ್ದ ಇಲ್ಲಿನ ರಸ್ತೆಯಲ್ಲಿ ದೇವಳದ ಆನೆಯನ್ನು ನಡೆಸಿಕೊಂಡು ಹೋದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

ನೂಚಿಲ ಎಂಬಲ್ಲಿ ಅವರಣ ಗೋಡೆ ಕುಸಿದಿದೆ. ಹರಿಹರ ಪಲ್ಲತ್ತಡ್ಕದ ಹೊಳೆ, ದರ್ಪಣತೀರ್ಥ ಸೇರಿದಂತೆ ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT