ಶನಿವಾರ, ಏಪ್ರಿಲ್ 17, 2021
30 °C

ಕರಾವಳಿಯಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ ಬೀಳಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮಂಗಳವಾರದಿಂದ ಗುರುವಾರದವರೆಗೆ ಕರಾವಳಿಯಲ್ಲಿ ಭಾರಿ ಮಳೆ ಸುರಿಯಲಿದೆ. ಮೊದಲ ದಿನ ಮಳೆಯ ತೀವ್ರತೆ ಹೆಚ್ಚಿರಲಿದೆ. ನಂತರದ ಎರಡು ದಿನಗಳ ಸ್ವಲ್ಪ ಕಡಿಮೆಯಾಗಲಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಪ್ರಮಾಣದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತೀರದಲ್ಲಿ ಅಲೆಗಳ ಉಬ್ಬರ ಹೆಚ್ಚಿದ್ದು, ಬೃಹದಾಕಾರದ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿವೆ. ಮಂಗಳವಾರ ಸಂಜೆ 5.30ರಿಂದ ಗುರುವಾರ ತಡರಾತ್ರಿಯವರೆಗೆ ಈ ಪ್ರದೇಶದಲ್ಲಿ 3.5 ಮೀಟರ್‌ನಿಂದ 4 ಮೀಟರ್‌ ಎತ್ತರದ ಅಲೆಗಳು ದಡಕ್ಕೆ ಅಪ್ಪಳಿಸಲಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಿರುವ ಮುನ್ನೆಚ್ಚರಿಕೆಯಲ್ಲಿ ಇಲಾಖೆ ಹೇಳಿದೆ.

ಕರಾವಳಿಯಲ್ಲಿ ನೈರುತ್ಯ ದಿಕ್ಕಿಗೆ ಪ್ರತಿ ಗಂಟೆಗೆ 40ರಿಂದ 50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುತ್ತಿದೆ. ಮುಂದಿನ ಮೂರು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.