ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸಿದ ತಡೆಗೋಡೆ: ಮಣ್ಣಿನಡಿ ಸಿಲುಕಿದ ಕಾರುಗಳು

Last Updated 11 ಸೆಪ್ಟೆಂಬರ್ 2020, 8:32 IST
ಅಕ್ಷರ ಗಾತ್ರ
ADVERTISEMENT
""

ಮಂಗಳೂರು: ನಗರದ ಕುಂಟಿಕಾನದ ವಸತಿ ಸಮುಚ್ಚಯವೊಂದರ ತಡೆಗೋಡೆ ಕುಸಿದಿದ್ದು ಮಣ್ಣಿನಡಿ ಸುಮಾರು10 ಕ್ಕೂ ಅಧಿಕ ಕಾರುಗಳು ಹೂತು ಹೋಗಿರುವ ಶಂಕೆ ಉಂಟಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶುಕ್ರವಾರ ಬೆಳಿಗ್ಗೆ ತಡೆಗೋಡೆಯ ಒಂದು ಭಾಗದ ಗೋಡೆ ಕುಸಿದು, ಹಿಂಬದಿಯ ಹಾಸ್ಟೆಲ್‌ ಆವರಣದೊಳಗೆ ಮಣ್ಣು ಬಿದ್ದಿದೆ. ಇದೀಗ ಮತ್ತೊಂದು ಭಾಗದ ಗೋಡೆಯು ಕೂಡಾ ಕುಸಿಯುವ ಆತಂಕ ಸೃಷ್ಟಿಯಾಗಿದ್ದು ಈ ಹಿನ್ನೆಲೆ ಇನ್ನೂ ಕೂಡಾ ಕಾರ್ಯಾಚರಣೆ ಆರಂಭವಾಗಿಲ್ಲ ಎಂದು ಹೇಳಲಾಗಿದೆ.

ಅಗ್ನಿ ಶಾಮಕ ದಳ, ಸ್ಥಳೀಯ ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ್ದು ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಅವರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಕಟ್ಟಡ ಕುಸಿದಿರುವ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT