ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ, ರಸ್ತೆಗೆ ಬಿದ್ದ ಮರ, ಸಂಚಾರಕ್ಕೆ ಅಡಚಣೆ

Published 29 ಏಪ್ರಿಲ್ 2023, 14:50 IST
Last Updated 29 ಏಪ್ರಿಲ್ 2023, 14:50 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶನಿವಾರ ಗುಡುಗು ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಯಿತು.

ಒಂದು ಗಂಟೆ ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆಗಳ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕುಮಾರಧಾರದ ಬಳಿ ಮುಖ್ಯರಸ್ತೆಗೆ ಅಡ್ಡಲಾಗಿ ಮರವೊಂದು ಬಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಬಳಿಕ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು.

ಗಾಳಿಯಿಂದಾಗಿ ಕೆಲ ಮನೆಗಳ ಚಾವಣಿಗೆ ಹಾಕಿದ ಶೀಟುಗಳು ನೆಲಕ್ಕುರುಳಿವೆ. ಕೆಲವೆಡೆ ವಿದ್ಯುತ್ ತಂತಿ ಮೇಲೆ ಮರದ ಕೊಂಬೆ ಬಿದ್ದು ಹಾನಿಯಾಗಿವೆ. ಹೀಗಾಗಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ.‌ ಕುಮಾರಪರ್ವತ ಭಾಗದಲ್ಲಿ ಹಾಗೂ ಸುತಮುತ್ತಲ ಪ್ರದೇಶಗಳಲ್ಲಿಯೂ ಗಾಳಿಯೊಂದಿಗೆ ಮಳೆ ಸುರಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT