ಗುರುವಾರ , ಆಗಸ್ಟ್ 11, 2022
26 °C

ಮಂಗಳೂರಲ್ಲಿ ಭಾರಿ ಮಳೆ: ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ದ್ವಿಚಕ್ರವಾಹನ ಸವಾರರು ಪರದಾಡುವಂತಾಗಿದೆ. ಮಂಗಳೂರಿನ ಕೆಲ ಖಾಸಗಿ ಶಾಲೆಗಳು ರಜೆ ಘೋಷಿಸಿವೆ.

‘ಮಳೆ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ನಿಗಾ ವಹಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದರೆ  ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯ ನಿರ್ವಹಿಸಲು ಶಾಲೆಗಳಿಗೆ ಸೂಚಿಸಲಾಗಿದೆ. ಮಕ್ಕಳು ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

‘ಶಾಲೆಗೆ ಬಂದಿರುವ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಯಾ ತಾಲ್ಲೂಕುಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ರಜೆ ನಿರ್ಧಾರ ಕೈಗೊಳ್ಳಲು ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ಹವಾಮಾನ ಇಲಾಖೆ ಗುರುವಾರ ಯಲ್ಲೋ ಅಲರ್ಟ್‌ ಘೋಷಿಸಿದೆ. ಶುಕ್ರವಾರವೂ ಇದೇ ರೀತಿ ಮಳೆಯಾದರೆ, ಪರಿಸ್ಥಿತಿ ಅವಲೋಕಿಸಿ ಶಾಲೆಗಳಿಗೆ ರಜೆ ನೀಡುವ ಬಗ್ಗೆ ನಿರ್ಧರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.


ಅಸೈ ಮದಕದಲ್ಲಿ ಗುಡ್ಡೆ ಜರಿದು ಮನೆಗೆ ಹಾನಿ ಸಂಭವಿಸಿದೆ.. ಜೀವ ಭಯದಿಂದ ಮನೆ ನಿವಾಸಿಗಳು ಸ್ಥಳಾಂತರ ಗೊಂಡಿದ್ದಾರೆ


ಭಾರೀ ಮಳೆಯಿಂದಾಗಿ ಕೊಣಾಜೆ ಗ್ರಾಮದ ಮುಚ್ಚಿಲಕೋಡಿ ಎಂಬಲ್ಲಿಯ ಉಮೇಶ್ ಎಂಬವರ ಮನೆಬಳಕೆಯ ಬಾವಿಗೆ ಗುರುವಾರ ಬೆಳಿಗ್ಗೆ ಗುಡ್ಡ ಕುಸಿದು ಬಿದ್ದು ಸಂಪೂರ್ಣವಾಗಿ  ಮುಚ್ಚಿ ಹೋಗಿ

ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಶುಕ್ರವಾರ ಶಾಲಾ–ಕಾಲೇಜುಗಳಿಗೆ ರಜೆ ನೀಡುವ ಬಗ್ಗೆ ಪರಿಸ್ಥಿತಿ ಅವಲೋಕಿಸಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ವಿಮಾನ ನಿಲ್ದಾಣ ರಸ್ತೆಯಲ್ಲೂ ಸಂಚಾರಕ್ಕೆ ತೊಂದರೆಯಾಗಿದೆ.  ಕೊಟ್ಟಾರ ಚೌಕಿಯಲ್ಲೂ ನೀರು ನಿಂತಿದೆ. ಕೊಣಾಜೆ ಬಳಿಯ ಮುಡಿಪುವಿನ   ಮಂಜನಾಡಿ ಗ್ರಾಮದ ಅಸೈಗೋಳಿ ಬಳಿ ಆವರಣ ಗೋಡೆ ಕುಸಿದು ಬಿದ್ದು ಕೆ ವೇದಾವತಿ ಎಂಬವರ ಮನೆಗೆ ಹಾನಿಯಾಗಿದೆ.

ಕೊಣಾಜೆ ಬಳಿಯ ಮುಡಿಪುವಿನ   ಮಂಜನಾಡಿ ಗ್ರಾಮದ ಅಸೈಗೋಳಿ ಬಳಿ ಆವರಣ ಗೋಡೆ ಕುಸಿದು ಬಿದ್ದು ಕೆ ವೇದಾವತಿ ಎಂಬವರ ಮನೆಗೆ ಹಾನಿಯಾಗಿದೆ. ಕೊಣಾಜೆ ಗ್ರಾಮದ ಮುಚ್ಚಿಲಕೋಡಿಯ ಉಮೇಶ್ ಎಂಬವರ ಮನೆಯ  ಬಾವಿಗೆ ಗುಡ್ಡ ಕುಸಿದು ಬಿದ್ದು ಬಾವಿ ಸಂಪೂರ್ಣವಾಗಿ  ಮುಚ್ಚಿ ಹೋಗಿದೆ.

ಮರವೂರು ಸೇತುವೆ ಬಳಿ ಬಿರುಕು ಉಂಟಾಗಿದ್ದು ಮುಲ್ಕಿಯ ಶ್ರೀದೇವಿ ಕಾಲೇಜು ಬಳಿ ಭೂಕುಸಿತ ಉಂಟಾಗಿದೆ.


ಶ್ರೀ ದೇವಿ ಕಾಲೇಜು ಬಳಿ ಭೂ ಕುಸಿತದಿಂದ ಗುಡ್ಡ ಜರಿದಿರುವುದು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು