ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಮಳೆ: ಮಂಗಳೂರಿನಲ್ಲಿ ಶಾಲೆ–ಕಾಲೇಜಿಗೆ ರಜೆ

Published 8 ಜುಲೈ 2024, 6:00 IST
Last Updated 8 ಜುಲೈ 2024, 6:00 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಸೋಮವಾರವೂ ಧಾರಾಕಾರ ಮಳೆಯಾಗುತ್ತಿದೆ. ಭಾನುವಾರ ರಾತ್ರಿಯಿಡೀ ಬಿಟ್ಟು ಬಿಟ್ಟು ಬಿರುಸಿನ ಮಳೆ ಆಗಿತ್ತು. ಸೋಮವಾರ ಮುಂಜಾನೆಯಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದೆ.

ಸೋಮವಾರ ಬೆಳಿಗ್ಗೆ 8.30 ರವರೆಗಿನ 24 ಗಂಟೆಗಳಲ್ಲಿ ಮಂಗಳೂರು ತಾಲ್ಲೂಕಿನ ಬಾಳದಲ್ಲಿ 16.80 ಸೆಂ.ಮೀ, ಬಜಪೆಯಲ್ಲಿ 12.75, ಎಕ್ಕಾರಿನಲ್ಲಿ 9.20, ಸುಳ್ಯ ತಾಲ್ಲೂಕಿನ ಅರಂರೋಡಿನಲ್ಲಿ 9.95, ಜಾಲ್ಸೂರಿನಲ್ಲಿ 9.90, ನೆಲ್ಲೂರು ಕೆಮ್ರಾಜೆಯಲ್ಲಿ 9.60 ಬೆಳ್ತಂಗಡಿ ತಾಲ್ಲೂಕಿನ ಉಜಿರೆಯಲ್ಲಿ, 9.0, ಪುತ್ತೂರು ತಾಲ್ಲೂಕಿನ ಬಡಗನ್ನೂರಿನಲ್ಲಿ 8.85, ಮೂಲ್ಕಿ ತಾಲ್ಲೂಕಿನ ಕೆಮ್ರಾಲ್ ನಲ್ಲಿ 8.7 ಸೆಂ.ಮೀ. ಮಳೆಯಾಗಿದೆ.

ಭಾರಿ ಮಳೆಯ ಮುನ್ಸೂಚನೆ ಇದ್ದ ಕಾರಣ ಮಂಗಳೂರು ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೆಜುಗಳಿಗೆ ತಹಶಿಲ್ದಾರ್ ಅವರು ರಜೆ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT