ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸಾಧ್ಯತೆ: 19, 20ರಂದು ಆರೆಂಜ್ ಅಲರ್ಟ್

Published 16 ಮೇ 2024, 10:59 IST
Last Updated 16 ಮೇ 2024, 10:59 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18ರಿಂದ 21ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಆರೆಂಜ್ ಅಲರ್ಟ್‌ ಇರುವ ದಿನಗಳಲ್ಲಿ ಮಿಂಚು, ಗುಡುಗು ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಈ ಎರಡು ದಿನಗಳಲ್ಲಿ ಗುಡುಗು ಸಿಡಿಲುಗಳಿಂದ ಕೂಡಿದ ಮಳೆಯಾಗಲಿದೆ. ಕೆಲವೆಡೆ 6.45 ಸೆಂ.ಮೀ.ಯಿಂದ 11.55 ಸೆಂ.ಮೀ.ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT