ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ಶಾಲೆ–ಕಾಲೇಜುಗಳಿಗೆ ರಜೆ ಮುಂದುವರಿಕೆ

Published 6 ಜುಲೈ 2023, 15:45 IST
Last Updated 6 ಜುಲೈ 2023, 15:45 IST
ಅಕ್ಷರ ಗಾತ್ರ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 7ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಮತ್ತು ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಪ್ರವಾಸಿಗರು, ಸಾರ್ವಜನಿಕರು ಕಡಲತೀರಕ್ಕೆ ಹೋಗಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಳ್ಳ–ಕೊಳ್ಳಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಬುಧವಾರ ಮತ್ತು ಗುರುವಾರ ಕೂಡ ಜಿಲ್ಲೆಯಲ್ಲಿ ಶಾಲೆ- ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT