ಮಂಗಳೂರು: ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗಳವಾರ ನಸುಕಿನಿಂದಲೇ ಭಾರಿ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಪ್ರಾರಂಭವಾದ ಮಳೆ ಮಂಗಳವಾರ ಬೆಳಗಿನವರೆಗೂ ಎಡೆಬಿಡದೆ ಸುರಿದಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮೂಲ್ಕಿ ಮತ್ತು ಮೂಡುಬಿದಿರೆ ತಾಲ್ಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಮಂಗಳೂರಿನ ಕದ್ರಿ ಪಾರ್ಕ್ನಲ್ಲಿ ದೊಡ್ಡ ಮರ ಬಿದ್ದು, ಕೆಲಕಾಲ ಸಂಚಾರಕ್ಕೆ ತೊಡಕಾಯಿತು. ಮಧ್ಯಾಹ್ನದ ನಂತರ ಮಳೆ ಕೊಂಚ ಇಳಿಮುಖವಾಯಿತು.

ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ಮಧ್ಯಾಹ್ನದವರೆಗೆ ಧಾರಾಕಾರ ಮಳೆ ಸುರಿದಿದ್ದು, ನಗರ ಸೇರಿದಂತೆ ಹಲವೆಡೆ ರಸ್ತೆಯಲ್ಲಿ ಮಳೆ ನೀರು ಸಂಗ್ರಹವಾಗಿ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು.

ಬೆಳಿಗ್ಗೆ ಸುರಿದ ಭಾರಿ ಮಳೆಗೆ ಮಣಿಪಾಲ ಸಮೀಪದ ಐನಾಕ್ಸ್ ಬಳಿ ಮಣ್ಣು, ಕಲ್ಲುಗಳು ಮಳೆ ನೀರಿನೊಂದಿಗೆ ರಾಷ್ಟ್ರೀಯ ಹೆದ್ದಾರಿಗೆ ಹರಿದು, ಕೆಲಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಸಮೀಪದ ಅಂಗಡಿ, ಮನೆಗಳಿಗೂ ಮಳೆ ನೀರು ನುಗ್ಗಿತ್ತು. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳು ಬದಲಿ ಮಾರ್ಗಗಳಲ್ಲಿ ಸಂಚರಿಸಿದವು.

ಭಾರಿ ಗಾಳಿ ಬೀಸಿದ ಪರಿಣಾಮವಾಗಿ ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಧಾರಾಶಾಯಿಯಾದವು. ಕಾರ್ಕಳ, ಕುಂದಾಪುರ, ಬೈಂದೂರು, ಹೆಬ್ರಿ ತಾಲ್ಲೂಕಿನ ವಿವಿಧೆಡೆ ಭಾರಿ ಮಳೆ ಸುರಿದಿದೆ. ಬ್ರಹ್ಮಾವರದಲ್ಲಿ ಗಾಳಿ ಮಳೆಗೆ ಹಲವೆಡೆ ಮರಗಳು ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕೆಲವೆಡೆ ಮನೆಗಳ ಮೇಲೆ ಮರ ಬಿದ್ದ ವರದಿಯಾಗಿದೆ.

ಮೀನುಗಾರರು ಸಮುದ್ರಕ್ಕೆ ತೆರಳಬಾರದು, ಮೀನಗಾರಿಕೆಗೆ ತೆರಳಿರುವ ದೋಣಿಗಳು ದಡಕ್ಕೆ ಮರಳಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರ ಸೂಚನೆ ನೀಡಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಮಳೆ ಆರಂಭವಾಗಿ ಎಡೆಬಿಡದೆ ಸುರಿದಿದೆ. ಕುದುರೆಮುಖ, ಕಳಸ, ಶೃಂಗೇರಿ, ಕೊಪ್ಪ, ಕೊಟ್ಟಿಗೆಹಾರ, ಮೂಡಿಗೆರೆ, ಎನ್.ಆರ್. ಪುರ, ಚಿಕ್ಕಮಗಳೂರು ನಗರ, ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಕಡೂರು ಸುತ್ತಮುತ್ತ ಧಾರಾಕಾರ ಮಳೆಯಾಗಿದೆ.

ಮೂಡಿಗೆರೆ ತಾಲ್ಲೂಕಿನ ಸುಂಕಸಾಲೆ ಬಳಿ ಮರವೊಂದು ಖಾಸಗಿ ಬಸ್, ಮಿನಿ ಬಸ್ ಮತ್ತು ಬೈಕ್ ಮೇಲೆ ಬಿದ್ದಿದೆ. ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿದ್ದು, ಬಸ್ ಮುಂಭಾಗ ಜಖಂಗೊಂಡಿದೆ. ಕೊಟ್ಟಿಗೆಹಾರ– ಕಳಸ ರಾಜ್ಯ ಹೆದ್ದಾರಿಯಲ್ಲಿ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.