ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ: ಚಾರ್ಮಾಡಿ ಘಾಟಿ ತಿರುವಿನಲ್ಲಿ ಸಿಕ್ಕಿಹಾಕಿಕೊಂಡ ಲಾರಿ: ವಾಹನ ದಟ್ಟಣೆ

Published 18 ಮಾರ್ಚ್ 2024, 14:12 IST
Last Updated 18 ಮಾರ್ಚ್ 2024, 14:12 IST
ಅಕ್ಷರ ಗಾತ್ರ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಸೋಮವಾರ ಬೆಳಿಗ್ಗೆ 16 ಚಕ್ರದ ಲಾರಿ ತಿರುವು ತೆಗೆದುಕೊಳ್ಳಲು ಆಗದೆ, ರಸ್ತೆ ಮಧ್ಯೆ ಸಿಕ್ಕಿಹಾಕಿಕೊಂಡಿದ್ದು, ಇದರಿಂದ ವಾಹನಗಳು ಮುಂದೆ ಸಾಗಲಾಗದೆ ದಟ್ಟಣೆ ಉಂಟಾಗಿತ್ತು. ಲಾರಿ ಚಾಲಕನ ಮಾಡಿದ ತಪ್ಪಿನಿಂದ ವಾಹನ ಸವಾರರು ಪರದಾಡುವಂತಾಯಿತು.

ಪೋಲಿಸರು, ಚಾರ್ಮಾಡಿ ಹಸನಬ್ಬರ ತಂಡ ಹಾಗೂ ಇತರರು ಲಾರಿಯನ್ನು ಕ್ರೇನ್ ಮೂಲಕ ಸ್ಥಳಾಂತರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಚಾರ್ಮಾಡಿ ಘಾಟಿಯಲ್ಲಿ ಘನ ವಾಹನಗಳ ಪ್ರವೇಶಕ್ಕೆ ನಿಷೇಧ ಇದೆ. ಹುಬ್ಬಳ್ಳಿಯಿಂದ ಮಂಗಳೂರಿನ ಕಡೆ ಸಿಮೆಂಟ್ ಸಾಗಿಸುತ್ತಿದ್ದ ಈ ಲಾರಿ ಕೊಟ್ಟಿಗೆಹಾರ ಚೆಕ್ ಪೋಸ್ಟ್‌ನಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಘಾಟಿ ಮಾರ್ಗವಾಗಿ ಬಂದಿದೆ ಎಂದು ಸ್ಥಳೀಯರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT