ಮಂಗಳೂರು: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದೆ ಸಂಭವಿಸಬಹುದಾದ ಅಪಾಯವನ್ನು ತಡೆಗಡ್ಡುವ ನಿಟ್ಟಿನಲ್ಲಿ ಹಾಗೂ ರಸ್ತೆಯ ಸುರಕ್ಷತೆಗಾಗಿ ಇದೇ 11 ರಿಂದ ಆಗಸ್ಟ್ 30ರವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ, ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್ಪೋಸ್ಟ್ ಆರಂಭಿಸಿ, 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿ ನಿಯೋಜಿಸಲು ಸೂಚಿಸಲಾಗಿದೆ. ಎಲ್ಲ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಣೆ ವಾಹನಗಳು, ವಾಹನದ ನೋಂದಣಿ ತೂಕ 16,200 ಕೆ.ಜಿ. ಗಿಂತ ಹೆಚ್ಚಿನ ಸರಕು ಸಾಗಣೆ ವಾಹನ, ಬುಲೆಟ್ ಟ್ಯಾಂಕರ್, ಶಿಪ್, ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್, ಮಲ್ಟಿ ಎಕ್ಸಲ್ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.