ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾರ್ಮಾಡಿ ಘಾಟ್: ಭಾರಿ ವಾಹನ ಸಂಚಾರ ನಿಷೇಧ

Last Updated 19 ಡಿಸೆಂಬರ್ 2021, 4:51 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-73 ಮಂಗಳೂರು-ತುಮಕೂರು ರಸ್ತೆಯ 75 ಕಿ.ಮೀ.ಯಿಂದ (ಚಾರ್ಮಾಡಿ ಗ್ರಾಮ) 86.20 ಕಿ.ಮೀ.ವರೆಗಿನ (ದಕ್ಷಿಣ ಕನ್ನಡ ಜಿಲ್ಲಾ ಗಡಿ) ಚಾರ್ಮಾಟಿ ಘಾಟ್ ರಸ್ತೆಯಲ್ಲಿ ಡಿ.18 ರಿಂದ ಜಾರಿಗೆ ಬರುವಂತೆ
ಮುಂದಿನ ಆದೇಶದವರೆಗೆ ದಿನದ 24 ಗಂಟೆ ಲಘು ಹಾಗೂ ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ, ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರು ಸಂಚರಿಸುವ ಕೆಎಸ್‌ಆರ್‌ಟಿಸಿ ಕೆಂಪು ಬಸ್ಸು, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೊ ಟ್ರಾವೆಲರ್ಸ್, ಆಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್.ಸಿ.ವಿ(ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ದಿನದ 24 ಗಂಟೆಯೂ
ಸಂಚರಿಸಬಹುದಾಗಿದೆ.

ಬುಲೆಟ್ ಟ್ಯಾಂಕರ್ಸ್, ಪಿಪ್ ಕಾರ್ಗೋ ಕಂಟೇನರ್ಸ್ ಹಾಗೂ ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್, ಕೆಎಸ್‌ಆರ್‌ಟಿಸಿ ರಾಜಹಂಸ
ಮತ್ತು ಎಲ್ಲ ಬಗ್ಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ದಿನದ 24 ಗಂಟೆಯೂ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT