ಜನಾರ್ದನ ಪೂಜಾರಿ ವಿರುದ್ಧದ ಪ್ರಕರಣ ರದ್ದು

7

ಜನಾರ್ದನ ಪೂಜಾರಿ ವಿರುದ್ಧದ ಪ್ರಕರಣ ರದ್ದು

Published:
Updated:

ಬೆಂಗಳೂರು: 2014ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ವಿರುದ್ಧ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.

‘ನನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಜನಾರ್ದನ ಪೂಜಾರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾ ಪುರಸ್ಕರಿಸಿದ್ದು, ಈ ಸಂಬಂಧ ಮಂಗಳೂರು 2ನೇ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿನ ವಿಚಾರಣೆಯನ್ನು ರದ್ದುಪಡಿಸಿದೆ.

ಜನಾರ್ದನ ಪೂಜಾರಿ 2014ರ ಲೋಕಸಭೆ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ 2014ರ ಮಾರ್ಚ್‌ 26ರಂದು ನಾಮಪತ್ರ ಸಲ್ಲಿಸಿದ್ದರು.

‘ನಂತರ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿ ಜಿ.ವಿ.ರಾಜಶೇಖರ್ ಎಂಬುವರು ಮಂಗಳೂರು ಉತ್ತರ ಠಾಣಾ ಪೊಲೀಸರಿಗೆ ದೂರು ದಾಖಲಿಸಿದ್ದರು.

ಜನಪ್ರತಿನಿಧಿಗಳ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಕಾಯ್ದೆಯ ವಿವಿಧ ಕಲಂಗಳ ಉಲ್ಲಂಘನೆ ಅಡಿ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ್ದ  ನ್ಯಾಯಾಲಯವು ಪೂಜಾರಿ ಅವರಿಗೆ 2015ರ ಅಕ್ಟೋಬರ್ 1ರಂದು ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶಿಸಿತ್ತು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !