ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಬ: 40.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು

Published 23 ಏಪ್ರಿಲ್ 2024, 15:45 IST
Last Updated 23 ಏಪ್ರಿಲ್ 2024, 15:45 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿ ಮಂಗಳವಾರ 40.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ವರ್ಷ ಬೇಸಿಗೆಯಲ್ಲಿ ದಾಖಲಾದ ಗರಿಷ್ಠ ತಾಪಮಾನವಾಗಿದೆ.

ಮಧ್ಯಾಹ್ನ 2.30ರ ವೇಳೆಗೆ ಇಲ್ಲಿ 40.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೂ, 45 ಡಿಗ್ರಿ ತಾಪಮಾನ ಇರುವಷ್ಟು ಧಗೆ ಇತ್ತು ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ. ಏಪ್ರಿಲ್ 5ರಂದು ಇದೇ ತಾಲ್ಲೂಕಿನಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿತ್ತು.

ಮಂಗಳೂರು ನಗರದಲ್ಲಿ ಗರಿಷ್ಠ 36, ಕನಿಷ್ಠ 25 ಡಿಗ್ರಿ ಸೆ. ಉಷ್ಣತೆ ಇತ್ತು.

ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಮಳೆಯಾಗಿದ್ದರೂ, ವಾತಾವರಣದಲ್ಲಿ ತಂಪು ಮೂಡಿಲ್ಲ. ದಿನದಿಂದ ದಿನಕ್ಕೆ ಧಗೆ ಹೆಚ್ಚುತ್ತಿರುವ ಅನುಭವವಾಗುತ್ತಿದೆ.

ಕರಾವಳಿ ಭಾಗದಲ್ಲಿ ಮುಂದಿನ ಐದು ದಿನ (ಏ.26ರವರೆಗೆ) ಬಿಸಿಗಾಳಿ ಬೀಸಲಿದ್ದು, ಗರಿಷ್ಠ ತಾಪಮಾನ 2ರಿಂದ3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT