ಮಂಗಳೂರು: ನಗರದ ಕೊಟ್ಟಾರ ಚೌಕಿ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿನ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.
.ಮಂಗಳೂರು: ವಿದ್ಯುನ್ಮಾನ ವಾಹನ ಚಾಲನಾ ಪರೀಕ್ಷಾ ಪಥದಲ್ಲಿ ಕಂಪ್ಯೂಟರೀಕೃತ ವ್ಯವಸ್ಥೆ .
ಸ್ಕೂಟರ್ ನಲ್ಲಿ ಸಾಗುತ್ತಿದ್ದ ಮಹಿಳೆಯು ಗುಂಡಿ ತಪ್ಪಿಸುವ ಭರದಲ್ಲಿ ಹೆದ್ದಾರಿಗೆ ಉರುಳಿ ಬಿದ್ದಿದ್ದರು. ಈ ವೇಳೆ ಕೂಳೂರು ಕಡೆಯಿಂದ ಸಾಗಿ ಬಂದ ಮೀನಿನ ಲಾರಿ ಅವರ ಮೇಲೆ ಹರಿದಿತ್ತು.

ಉಡುಪಿ ಜಿಲ್ಲೆಯ ಪರ್ಕಳದ ಮಾಧವಿ (38 ) ಮೃತ ಮಹಿಳೆ. ಅವರು ನಗರದ ಹೊರವಲಯದ ಚಿತ್ರಾಪುರದಲ್ಲಿ ನೆಲೆಸಿದ್ದರು.

ಕುಂಟಿಕಾನದ ಎ.ಜೆ ಆಸ್ಪತ್ರೆಯ ರಕ್ತ ನಿಧಿಯಲ್ಲಿ ಟೆಕ್ನಿಷಿಯನ್ ಆಗಿದ್ದ ಅವರು ಬೆಳಿಗ್ಗೆ ಚಿತ್ರಾಪುರದಿಂದ ನಗರಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ.
.ಮಂಗಳೂರು | ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಕಿರುಕುಳ: ಕ್ರಮಕ್ಕೆ ಆಗ್ರಹ.
ಹೆದ್ದಾರಿ ಗುಂಡಿ ಮುಚ್ಚದ್ದಕ್ಕೆ ಆಕ್ರೋಶ: ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅನೇಕ ಕಡೆ ಭಾರಿ ಗಾತ್ರದ ಗುಂಡಿಗಳು ಉಂಟಾಗಿವೆ. ಆದರೂ ಗುಂಡಿಗಳನ್ನು ದುರಸ್ತಿ ಪಡಿಸಲು ಕ್ರಮವಹಿಸದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
.ಮಂಗಳೂರು | ‘ಮತೀಯತೆ ಕ್ಯಾನ್ಸರ್ಗೆ ಸಿಗದ ಚಿಕಿತ್ಸೆ’ : ಡಾ.ಶ್ರೀನಿವಾಸ ಬೇಸರ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.