ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌: ಹಸಿದ ಹೊಟ್ಟೆಗೆ ಹೊಡೆತ ಎಂದ ರಮಾನಾಥ ರೈ

ವರ್ಷದ ಎರಡು ಬಾರಿ ಹೆಚ್ಚಳ:
Last Updated 17 ಜೂನ್ 2021, 4:17 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್–19 ಲಾಕ್‌ಡೌನ್, ಇಂಧನ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಂದರ್ಭದಲ್ಲೇ ವಿದ್ಯುತ್ ದರ ಏರಿಕೆಯ ಮೂಲಕ ಜನರ ಹಸಿದ ಹೊಟ್ಟೆಗೆ ಹೊಡೆದಂತಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದರು.

ಬುಧವಾರ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಒಂದು ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿದೆ. ಕೋವಿಡ್–19 ಸಂಕಷ್ಟದ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳಲ್ಲಿ ಲಾಕ್‌ಡೌನ್ ಅವಧಿಯ ವಿದ್ಯುತ್ ಬಿಲ್ ಮನ್ನಾ ಮಾಡಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ’ ಎಂದು ದೂರಿದರು.

ಕಾಂಗ್ರೆಸ್ ಆಡಳಿತದಲ್ಲಿ ವಿದ್ಯುತ್ ಕಂಪನಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಸದ್ಯ ಕಂಪನಿಗಳು ನಷ್ಟದಲ್ಲಿದ್ದರೆ ಅದಕ್ಕೆ ಆ ಕಂಪನಿಗಳ ಅದಕ್ಷತೆ, ಭ್ರಷ್ಟಾಚಾರವೇ ಕಾರಣ ಎಂದರು.

ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆಯಾಗುತ್ತದೆ. ಈ ನಡುವೆ ಅದಾನಿ ಕಂಪನಿ ಸೇರಿದಂತೆ ನಾನಾ ಕಂಪನಿಗಳಿಂದ ಸರ್ಕಾರ ವಿದ್ಯುತ್ ಖರೀದಿಸುತ್ತಿದೆ. ಕಂಪನಿಗಳ ಅನುಕೂಲಕ್ಕಾಗಿ ಸಂಕಷ್ಟ ಸಂದರ್ಭದಲ್ಲಿ ಜನರಿಗೆ ಹೊರೆ ನೀಡುತ್ತಿದೆ. ಸರ್ಕಾರಕ್ಕೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಇಲ್ಲ. ಬದಲಾಗಿ ವ್ಯಾಪಾರಿಗಳಂತೆ ಕಾರ್ಯ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು.

ಮಾಜಿ ಶಾಸಕ ಜೆ.ಆರ್.ಲೋಬೊ ಮಾತನಾಡಿ, ಮೆಸ್ಕಾಂ, ಬೆಸ್ಕಾಂ ಹೊರತು
ಪಡಿಸಿ ಉಳಿದ ರಾಜ್ಯದ ವಿದ್ಯುತ್ ಸರಬ
ರಾಜು ಕಂಪನಿಗಳ ನಷ್ಟಕ್ಕೆ ಅವುಗಳ ಅದಕ್ಷತೆಯೇ ಕಾರಣ. ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗ್ರಾಹಕರಿಂದ ಸಮರ್ಪಕ
ವಾಗಿ ವಿದ್ಯುತ್ ದರ ಪಾವತಿಯಾಗುತ್ತದೆ. ಹಾಗಿದ್ದರೂ ನಷ್ಟದ ನೆಪವೊಡ್ಡಿ ದರ ಏರಿಕೆಯ ಮೂಲಕ ಹೊರೆ ಹೇರುವುದಕ್ಕೆ ಅರ್ಥವಿಲ್ಲ ಎಂದರು.

ಸೌರ ವಿದ್ಯುತ್ ಮೇಲಿನ ನೀತಿಯನ್ನು ಕೂಡಾ ಬದಲಾಯಿಸುವ ಮೂಲಕ ಲಕ್ಷಾಂತರ ಖರ್ಚು ಮಾಡಿ ಸೌರ ಶಕ್ತಿಯನ್ನು ಅಳವಡಿಸಿಕೊಂಡವರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಶಶಿಧರ ಹೆಗ್ಡೆ, ಶಾಹುಲ್ ಹಮೀದ್, ಅಬ್ದುಲ್ ರವೂಫ್, ಭಾಸ್ಕರ್ ಕೆ., ಅಶೋಕ್ ಡಿ.ಕೆ., ಸದಾಶಿವ ಉಳ್ಳಾಲ್, ಅಪ್ಪಿ, ನವೀನ್ ಡಿಸೋಜ, ಪ್ರತಿಭಾ ಕುಳಾಯಿ, ಶಬೀರ್ ಸಿದ್ಧಕಟ್ಟೆ, ಬೇಬಿ ಕುಂದರ್, ಸುರೇಂದ್ರ ಕಾಂಬ್ಳಿ, ಅಬ್ಬಾಸ್ ಅಲಿ, ಲಾರೆನ್ಸ್ ಡಿಸೋಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT