ಮೂಡುಬಿದಿರೆ (ದಕ್ಷಿಣ ಕನ್ನಡ): ಅಪಘಾತ ಪ್ರಕರಣವೊಂದರಲ್ಲಿ ಬಸ್ ಮಾಲೀಕರಿಂದ ಕಾನೂನುಬಾಹಿರವಾಗಿ ಹಣ ವಸೂಲಿ ಮಾಡಿ ಪರಿಹಾರವಾಗಿ ನೀಡಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಚಾಲಕ ಸಮಿತ್ರಾಜ್ ಧರೆಗುಡ್ಡೆ ಅವರನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

2024ರ ನವೆಂಬರ್ 11ರಂದು ಖಾಸಗಿ ಬಸ್ವೊಂದು ಇಲ್ಲಿನ ಮೈಟ್ ಎಂಜಿನಿಯರಿಂಗ್ ಕಾಲೇಜು ಎದುರಿನ ರಸ್ತೆಯಲ್ಲಿ ಸ್ಕೂಟರ್ಗೆ ಡಿಕ್ಕಿ ಹೊಡೆದು ಇಬ್ಬರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರು ಗಂಭೀರ ಗಾಯಗೊಂಡಿದ್ದರು.

ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿ ವಾಹನ ಸಂಚಾರಕ್ಕೆ ತಡೆಯೊಡ್ಡಿದ್ದರಿಂದ ಉದ್ರಿಕ್ತ ವಾತಾವರಣ ಉಂಟಾಗಿತ್ತು. ಈ ವೇಳೆ ಸ್ಥಳದಲ್ಲಿದ್ದ ಸಮಿತ್ ರಾಜ್, ಮಾಲೀಕ ರಫೀಕ್ ಅವರಿಂದ ಗಾಯಾಳುಗಳಿಗೆ ₹ 5 ಲಕ್ಷ ಕೊಡಿಸಿದ್ದರು.

‘ಸಮಿತ್ ರಾಜ್ ನನ್ನಿಂದ ಬಲವಂತವಾಗಿ ಗಾಯಾಳುಗಳಿಗೆ ₹ 5 ಲಕ್ಷ ಪರಿಹಾರ ಕೊಡಿಸಿದ್ದಾರೆ. ಇದು ಕಾನೂನು ಬಾಹಿರವಾಗಿದ್ದು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕೆಲ ದಿನಗಳ ಹಿಂದೆ ಮೂಡುಬಿದಿರೆ ಪೊಲೀಸರಿಗೆ ಬಸ್ ಮಾಲಕ ರಫೀಕ್ ದೂರು ನೀಡಿದ್ದರು. ಆರೋಪಿ ಸಮಿತ್ ರಾಜ್ರನ್ನು ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.