ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಕರೆ: ಒಬ್ಬನ ಬಂಧನ

Last Updated 19 ಆಗಸ್ಟ್ 2020, 15:35 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಬಜ್ಪೆಯ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ವ್ಯಕ್ತಿಯೊಬ್ಬ ಬುಧವಾರ ಹುಸಿ ಕರೆ ಮಾಡಿ ಬೆದರಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಈ ಹಿಂದೆ ನಿರ್ದೇಶಕರಾಗಿದ್ದ ವಾಸುದೇವ್ ರಾವ್‌ ಅವರ ಮೊಬೈಲ್‌ಗೆ ಬುಧವಾರ ಮಧ್ಯಾಹ್ನ ಕರೆ ಮಾಡಿದ ವ್ಯಕ್ತಿ, ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಒಡ್ಡಿದ್ದಾನೆ. ಕೂಡಲೇ ಅವರು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಹುಸಿ ಬಾಂಬ್ ಕರೆ ಎಂಬುದು ದೃಢಪಟ್ಟಿದೆ.

‘ನೇರವಾಗಿ ವಿಮಾನ ನಿಲ್ದಾಣಕ್ಕೆ ಯಾವುದೇ ಬೆದರಿಕೆ ಕರೆ ಬಂದಿಲ್ಲ. ಆದರೆ ಮಾಜಿ ನಿರ್ದೇಶಕರ ಮೊಬೈಲ್‌ಗೆ ಹುಸಿಬಾಂಬ್ ಕರೆ ಬಂದಿದ್ದು, ಕೂಡಲೇ ನಮ್ಮ ಗಮನಕ್ಕೆ ತಂದಿದ್ದರು. ಪೊಲೀಸರಿಗೆ ಮಾಹಿತಿ ನೀಡಿದ್ದು, ಯಾವುದೇ ಆತಂಕಕಾರಿ ಪರಿಸ್ಥಿತಿ ಇಲ್ಲ’ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಒಬ್ಬನ ಬಂಧನ: ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಬ್ರಿಯ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಆತ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT