ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಂಗ್‌ ದ ಬರ್ಸ’ ಕಾರ್ಯಕ್ರಮಕ್ಕೆ ಬಜರಂಗದಳ ಅಡ್ಡಿ

Last Updated 27 ಮಾರ್ಚ್ 2023, 4:06 IST
ಅಕ್ಷರ ಗಾತ್ರ

ಮಂಗಳೂರು: ನಗರದ ಮರೋಳಿಯಲ್ಲಿ ಹೋಳಿ ಆಚರಣೆ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ‘ರಂಗ್‌ ದ ಬರ್ಸ 2023’ ಕಾರ್ಯಕ್ರಮಕ್ಕೆ ಬಜರಂಗದಳದ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಈ ಸಂಬಂಧ ಆರು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

‘ರಂಗ್‌ ದ ಬರ್ಸ ಕಾರ್ಯಕ್ರಮದ ಆರನೇ ಆವೃತ್ತಿಯು ಮಧ್ಯಾಹ್ನ ನಡೆಯುತ್ತಿತ್ತು. ಅರ್ಜುನ್ ಎಂಬುವರು ಈ ಕಾರ್ಯಕ್ರಮಕ್ಕೆ ಅನುಮತಿ ಪಡೆದಿದ್ದರು. ಕೆಲ ಯುವಕ–ಯುವತಿಯರು ಹೋಳಿ ಆಚರಣೆಯಲ್ಲಿ ತೊಡಗಿದ್ದಾಗ ಬಜರಂಗ ದಳದ ಕಾರ್ಯಕರ್ತರು ನುಗ್ಗಿ ದಾಂದಲೆ ನಡೆಸಿ, ಆಲಂಕಾರಿಕ ಪರಿಕರಗಳನ್ನು ಮುರಿದಿದ್ದಾರೆ. ಬ್ಯಾನರ್‌ಗಳನ್ನು ಹರಿದು ಹಾಕಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.

‘ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ್ದ ಕೆಲವರು, ಯುವಕ–ಯುವತಿಯರು ಧರಿಸಿದ್ದ ಉಡುಪಿನ ಬಗ್ಗೆ ಹಾಗೂ ಧ್ವನಿ ವರ್ಧಕ ಬಳಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆಯೋಜಕರ ಜೊತೆ ಮಾತಿನ ಚಕಮಕಿ ನಡೆಸಿದ್ದರು. ಗಲಾಟೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದೆವು. ದಾಂದಲೆ ನಡೆಸಿದ ಆರು ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಈ ಘಟನೆಯಿಂದ ಬೇಸತ್ತು ಆಯೋಜಕರು ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ’ ಎಂದು ಕಂಕನಾಡಿ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಘಟನೆಗೆ ಸಂಬಂಧಿಸಿದಂತೆ ಗಣೇಶ್‌ ಅತ್ತಾವರ, ಜೈಪ್ರಶಾಂತ್‌, ಬಾಲಚಂದ್ರ, ಅಕ್ಷಯ್‌, ಚಿರಾಗ್‌ ಹಾಗೂ ಮಿಥುನ್‌ ಅವರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT