ಮಂಗಳೂರು: ಭಾರಿ ಮಳೆ ಕಾರಣ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ಉಲ್ಲಾಳ, ಮುಲ್ಕಿ, ಬಂಟ್ವಾಳ, ಮೂಡುಬಿದಿರೆ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು (ಜುಲೈ 30) ರಜೆ ಘೋಷಿಸಲಾಗಿದೆ.
ಪುತ್ತೂರು ಕಂದಾಯ ಉಪ ವಿಭಾಗ ವ್ಯಾಪ್ತಿಯಲ್ಲಿ ಪರಿಸ್ಥಿತಿ ಅವಲೋಕಿಸಿ ನಿರ್ಧಾರ ಕೈಗೊಳ್ಳುವಂತೆ ಆಯಾ ತಹಶೀಲ್ದಾರರು, ಬಿಇಒಗಳಿಗೆ ಸೂಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಪಾಂಡೇಶ್ವರ ಶಿವನಗರ ಭಾಗದಲ್ಲಿ ಮನೆಗಳು ಜಲಾವೃತಗೊಂಡಿವೆ.
ಪುತ್ತೂರು: ಉಪವಿಭಾಗದ ಶಾಲೆಗಳಿಗೂ ರಜೆ
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಲ್ಲೂ ಶುಕ್ರವಾರ ರಾತ್ರಿ ವಿಪರೀತ ಮಳೆಯಾದ ಕಾರಣ ಶಾಲೆಗಳಿಗೆ ಉಪವಿಭಾಗಾಧಿಕಾರಿ ರಜೆ ಘೋಷಿಸಿದ್ದಾರೆ.ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಮಂಗಳೂರಿನಲ್ಲಿ ಭಾರಿ ಮಳೆ ಮುಂದುವರಿದಿದ್ದು ಪಾಂಡೇಶ್ವರ ಶಿವನಗರ ಭಾಗದಲ್ಲಿ ಮನೆಗಳು ಜಲಾವೃತಗೊಂಡಿವೆ. ಮನೆಯಲ್ಲಿ ಇರುವ ಜನರು ಕೂಡ ಸುರಕ್ಷಿತ ಸ್ಥಳಗಳಿಗೆ ತೆರಳಲು ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ.
ಪಂಪ್ವೆಲ್ ವೃತ್ತವೂ ಜಲಾವೃತವಾಗಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಯಿತು.ಮಂಗಳೂ ಸೆಂಟ್ರಲ್ ರೈಲು ನಿಲ್ದಾಣದ ಬಳಿಯ ಕೆಲ ಪ್ರದೇಶಗಳು ಜಲಾವೃತವಾಗಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.