ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹ ರಕ್ಷಕ ದಳದ ಸಿಬ್ಬಂದಿಯ ಕರ್ತವ್ಯದ ಅವಧಿಯನ್ನು ತಿಂಗಳಿಗೆ ಕನಿಷ್ಠ 20 ದಿನಗಳಿಗೆ ಹೆಚ್ಚಿಸುವಂತೆ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಅವರು ಗೃಹಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.

‘ಕಮಿಷನರೇಟ್ ವ್ಯಾಪ್ತಿಯ ಠಾಣೆಗಳಲ್ಲಿ ಗೃಹ ರಕ್ಷಕ ಸಿಬ್ಬಂದಿಗೆ ತಿಂಗಳಲ್ಲಿ ಕೇವಲ 10 ದಿನ ಮಾತ್ರ ಕರ್ತವ್ಯ ನಿರ್ವಹಿಸಲು ಅವಕಾಶ ಸಿಗುತ್ತಿದೆ. ಆದರೆ ಗ್ರಾಮೀಣ ಪ್ರದೇಶದ ಠಾಣೆಗಳಲ್ಲಿ ತಿಂಗಳಲ್ಲಿ 30 ದಿನವೂ ಕರ್ತವ್ಯ ನಿರ್ವಹಿಸಲು ಅವಕಾಶ ಸಿಗುತ್ತಿದೆ. ಈ ಸಿಬ್ಬಂದಿಗೆ ಗೌರವಧನವೇ ಜೀವನಾಧಾರ. ಹಾಗಾಗಿ ಕಮಿಷನರೇಟ್ ವ್ಯಾಪ್ತಿಯಲ್ಲೂ ಗೃಹರಕ್ಷಕ ಸಿಬ್ಬಂದಿಗೆ ತಿಂಗಳಲ್ಲಿ ಕನಿಷ್ಠ 20 ದಿನ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.