ಮಂಗಳವಾರ, ಮಾರ್ಚ್ 28, 2023
22 °C

ಕುಕ್ಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೋಮವಾರ ಭೇಟಿ ನೀಡಿ, ದೇವರ ದರ್ಶನ ಪಡೆದರು.

ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ದೇವಳದ ಹೊರಾಂಗಣದಲ್ಲಿ ನಡೆದ ಉತ್ಸವದಲ್ಲಿ ಪಾಲ್ಗೊಂಡರು. ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಶ್ರೀವತ್ಸ, ಪ್ರಸನ್ನ ದರ್ಬೆ, ಪಿ.ಜಿ.ಎಸ್.ಎನ್. ಪ್ರಸಾದ್, ಶೋಭಾ ಗಿರಿಧರ್, ವನಜಾ ವಿ.ಭಟ್, ಮಾಸ್ಟರ್ ಪ್ಲಾನ್ ಸದಸ್ಯ ಮನೋಜ್, ಪ್ರಮುಖರಾದ ಶ್ರೀಕುಮಾರ್ ಬಿಲದ್ವಾರ, ದಿನೇಶ್ ಸಂಪ್ಯಾಡಿ, ವೆಂಕಟ್ ವಲಲಂಬೆ, ಪ್ರಸಾದ್ ಕೆ.ರೈ ಇದ್ದರು.

ಶ್ರೀಗಳ ಆಶೀರ್ವಾದ: ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಸಚಿವ ಆರಗ ಜ್ಞಾನೇಂದ್ರ, ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದರು. ಶ್ರೀಗಳು ಸಚಿವರಿಗೆ ಶಾಲು ಹೊದೆಸಿ, ಪ್ರಸಾದ ನೀಡಿ ಶುಭ ಹಾರೈಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು