ಮಂಗಳೂರು: ಶಾರದಾ ವಿದ್ಯಾ ಸಂಸ್ಥೆಗಳ ಸಮೂಹದ ಹೊನಲು ಬೆಳಕಿನ ಕ್ರೀಡೋತ್ಸವ ಇದೇ 7ರಂದು ನಗರದ ಕೊಡಿಯಾಲ್ಬೈಲಿನ ಶಾರದಾ ವಿದ್ಯಾಲಯದ ‘ಭೂವರಾಹ ಬಯಲು ಸಭಾಂಗಣ'ದಲ್ಲಿ ನಡೆಯಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ. ಪುರಾಣಿಕ್, ‘ವಿದ್ಯಾರ್ಥಿಗಳಲ್ಲಿ ಶಿಸ್ತು, ಧೈರ್ಯದ ಮನೋಭಾವ ಬೆಳೆಸಲು, ಸಾಹಸ ಕ್ರೀಡೆ, ನೃತ್ಯ, ಸಂಗೀತಗಳನ್ನು ಒಳಗೊಂಡ 'ಹೊನಲು ಬೆಳಕಿನ ಕ್ರೀಡೋತ್ಸವ’ವನ್ನು ಅನೇಕ ವರ್ಷಗಳಿಂದ ಹಮ್ಮಿಕೊಳ್ಳುತ್ತಿದ್ದೇವೆ. ಈ ಸಲದ ಕ್ರೀಡೋತ್ಸವದಲ್ಲಿ 2 ಸಾವಿರ ವಿದ್ಯಾರ್ಥಿಗಳು ವಿವಿಧ ವಿನ್ಯಾಸಗಳ ರಚನೆ, ಸಾಹಸ, ಸಾಂಸ್ಕೃತಿಕ, ಮನೋರಂಜನಾ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಿದ್ದಾರೆ’ ಎಂದರು.

‘ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಂಜೆ 4ಕ್ಕೆ ಕ್ರೀಡೋತ್ಸವವನ್ನು ಉದ್ಘಾಟಿಸುವರು. ಶಾರದಾ ವಿದ್ಯಾಲಯ, ಶಾರದಾ ಪದವಿಪೂರ್ವ ಕಾಲೇಜು, ಶಾರದಾ ವಿದ್ಯಾನಿಕೇತನ ರೆಸಿಡೆನ್ಸಿಯಲ್ ಶಾಲೆ, ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆ. ಶಾರದಾ ಶುಭೋದಯ ವಿದ್ಯಾಲಯ, ಶಾರದಾ ಕಾಲೇಜು, ಶಾರದಾ ಆಯುರ್ವೇದ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು, ಶಾರದಾ ಯೋಗ ನ್ಯಾಚುರೋಪತಿ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಾಧ್ಯಾಪಕ ಪ್ರಶಾಂತ್ ನಾಯಕ್, ಸಮೀರ್ ಪುರಾಣಿಕ್, ಸುಧಾಕರ ರಾವ್ ಪೇಜಾವರ ಹಾಗೂ ದಯಾನಂದ ಕಟೀಲ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.