ಬಂಟ್ವಾಳ: ‘ಖಾಸಗಿ ಆಸ್ಪತ್ರೆಗೆ ಪೈಪೋಟಿ ನೀಡುವಂತೆ ಬಂಟ್ವಾಳ ಸಾರ್ವಜನಿಕ ಸರ್ಕಾರಿ ಸುಸಜ್ಜಿತ ಮತ್ತು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಇಲ್ಲಿನ ಶಾಸಕರ ಪ್ರಯತ್ನದಿಂದ ವ್ಯವಸ್ಥಿತ ಐಸಿಯು ಘಟಕವೂ ಸಿದ್ಧಗೊಂಡಿದೆ’ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ₹ 1.67 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಐಸಿಯು ಘಟಕ ಶುಕ್ರವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಎಲ್ಲ ಗ್ರಾಮೀಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನೂ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಿ ಮೇಲ್ದರ್ಜೆಗೆ ಏರಿಸುವ ಯೋಜನೆ ಕೇಂದ್ರ ಸರ್ಕಾರ ಹಾಕಿಕೊಂಡಿದೆ ಎಂದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎಂ.ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಪ್ರಮುಖರಾದ ನಂದರಾಮ ರೈ, ವಿಶ್ವನಾಥ ಚೆಂಡ್ತಿಮಾರ್, ಗಣೇಶ್ ರೈ ಮಾಣಿ, ಮಾಧವ ಮಾವೆ, ಸುರೇಶ್ ಕೋಟ್ಯಾನ್, ಸಂದೀಪ್ ಎಸ್.ಆರ್., ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್, ತಹಶೀಲ್ದಾರ್ ಡಾ.ಸ್ಮಿತಾ ರಾಮು, ವೈದ್ಯಾಧಿಕಾರಿ ಡಾ.ಪುಷ್ಪಲತಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುದರ್ಶನ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.