ಮಂಗಳೂರು: ನಗರದ ಹೊರವಲಯದ ಮಲ್ಲೂರಿನಲ್ಲಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದಿದೆ. ಬೀಪಾತುಮ್ಮ (72) ಗಾಯಗೊಂಡಿದ್ದಾರೆ.

ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಬಿಡದೇ ಮಳೆ ಸುರಿದಿದೆ. ಇದರಿಂದ ಸೋಮವಾರ ಬೆಳಿಗ್ಗೆ 5.30ರ ವೇಳೆಗೆ ಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಅವರ ಮನೆಯ ಹಿಂಭಾಗದಲ್ಲಿದ್ದ ಭಾರೀ ಗಾತ್ರದ ಗುಡ್ಡ ಕುಸಿದು ಬಿದ್ದಿದೆ.

ಇದರಿಂದ ಮನೆಯ ಗೋಡೆ ಕುಸಿದು ಬಿದ್ದು ಮನೆಯಲ್ಲಿದ್ದ ಮಹಿಳೆಯೊಬ್ಬರ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಝುಬೇರ್ ಕುಟುಂಬ ಇದೇ ಮನೆಯಲ್ಲಿ ವಾಸವಿದ್ದರು. ಭಾನುವಾರ ಅವರ ಕುಟುಂಬ ಪತ್ನಿ ಮನೆಗೆ ತೆರಳಿತ್ತು. ಇಲ್ಲದಿದ್ದರೆ ಗೋಡೆ ಕುಸಿತದಿಂದ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯ ಮುಖಂಡರಾದ ಎನ್.ಇ. ಮಹಮ್ಮದ್ ತಿಳಿಸಿದ್ದಾರೆ.

ಘಟನೆ ಬಳಿಕ ಸ್ಥಳೀಯ ಪಂಚಾಯಿತಿ ಅಧ್ಯಕ್ಷ ಎಂ ಇ ಇಸ್ಮಾಯಿಲ್, ಬೊಳ್ಳಂಕಿಣಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಳುಗಳಿಂದ ಘಟನೆ ವಿವರ ಪಡೆದಿದ್ದಾರೆ.
ಸ್ಥಳಕ್ಕೆ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ ಕೆ ಯೂಸುಫ್, ಸದಸ್ಯರಾದ ಇಲ್ಯಾಸ್ ಪಾದೆ, ಹಸನ್ ಬಾವ, ಟಿ ಅಬ್ಸಾಲಿ, ಸುಮ ಶೆಟ್ಟಿ, ದೆಮ್ಮಲೆ ಅಹ್ಮದ್ ಆಲಿಯಬ್ಬ, ಅಬ್ದುಲ್ ಲತೀಫ್ ಬೊಳ್ಳಂಕಿಣಿ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.