2020ರಲ್ಲಿ ‘ಮೈಕ್ರೊ ಕಾಂಟೆಸ್ಟ್’ ತಂತ್ರಜ್ಞಾನದೊಂದಿಗೆ ₹38 ಲಕ್ಷ ವೆಚ್ಚದಲ್ಲಿ ಈ ಸೇತುವೆ ದುರಸ್ತಿಗೊಳಿಸಲಾಗಿತ್ತು. ಆಗಿನ ಸಂಸದ ನಳಿನ್‌ಕುಮಾರ್ ಕಟೀಲ್ ಅವರು, ಹೊಸ ತಂತ್ರಜ್ಞಾನದೊಂದಿಗೆ ಸೇತುವೆ ಭದ್ರಗೊಳಿಸಿರುವ ಬಗ್ಗೆ ಮಾಹಿತಿ ನೀಡಿದ್ದರಿಂದ, ಜನರು ಆ ಮಾತಿನಲ್ಲಿ ವಿಶ್ವಾಸ ಹೊಂದಿದ್ದರು. ಇದಾಗಿ ಈಗ ನಾಲ್ಕು ವರ್ಷಗಳು ಕಳೆದಿವೆ. ಹಗಲು–ರಾತ್ರಿ ವಾಹನ ದಟ್ಟಣೆ ಇರುವ ಈ ರಸ್ತೆಯಲ್ಲಿ, ಬಸ್, ಲಾರಿ, ಟ್ಯಾಂಕರ್‌ಗಳು ಸಂಚರಿಸುತ್ತವೆ. ಏಕಕಾಲದಲ್ಲಿ ಎರಡು ಸಾಲಿನಲ್ಲಿ ವಾಹನಗಳು ಸಾಗುತ್ತವೆ. ಪ್ರಸ್ತುತ ಸೇತುವೆಯ ಧಾರಣ ಸಾಮರ್ಥ್ಯ ಯಾವ ಪ್ರಮಾಣದಲ್ಲಿದೆ ಎಂಬುದನ್ನು ತುರ್ತಾಗಿ ತಪಾಸಣೆ ನಡೆಸಬೇಕಾಗಿದೆ ಎಂದು ಪ್ರಯಾಣಿಕರೊಬ್ಬರು ಒತ್ತಾಯಿಸಿದರು.