ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇರ ವಿಮಾನ ವ್ಯವಸ್ಥೆ: ಖಾದರ್ ಭರವಸೆ

ಹಜ್ ಯಾತ್ರಿಗಳಿಗೆ ಲಸಿಕೆ
Published 30 ಏಪ್ರಿಲ್ 2024, 15:46 IST
Last Updated 30 ಏಪ್ರಿಲ್ 2024, 15:46 IST
ಅಕ್ಷರ ಗಾತ್ರ

ಮಂಗಳೂರು: ಪವಿತ್ರ ಹಜ್ ಯಾತ್ರೆಗೆ ಹೋಗುವ ಯಾತ್ರಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮವು ಮಂಗಳವಾರ ಜಪ್ಪಿನಮೊಗರು ಯೆನೆಪೋಯ ಶಾಲೆಯಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯ 1,044 ಮತ್ತು ಉಡುಪಿ ಜಿಲ್ಲೆಯ 79 ಮಂದಿ ಸೇರಿ ಒಟ್ಟು 1,123 ಜನರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ‘ಮುಂದಿನ ವರ್ಷದಿಂದ ಮಂಗಳೂರಿನಿಂದ ನೇರ ವಿಮಾನ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಲಾಗುವುದು. ಸರ್ಕಾರ ಹಾಗೂ ಸ್ಥಳೀಯ ದಾನಿಗಳ ನೆರವಿನಿಂದ ಹಜ್ ಭವನ ನಿರ್ಮಿಸಲಾಗುವುದು’ ಎಂದರು.

ಯೆನೆಪೋಯ ವಿಶ್ವವಿದ್ಯಾಲಯದ ಕುಲಾಧಿಪತಿ ವೈ.ಅಬ್ದುಲ್ ಕುಂಞ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೀವಮಾನದಲ್ಲಿ ಒಮ್ಮೆ ಪವಿತ್ರ ಹಜ್ ಯಾತ್ರೆ ಕೈಗೊಳ್ಳಬೇಕು ಎಂಬುದು ಎಲ್ಲ ಮುಸ್ಲಿಮರ ಆಸೆ. ಅದಕ್ಕಾಗಿ ಸರ್ಕಾರ ಸೌಲಭ್ಯ ಕಲ್ಪಿಸಿಕೊಡುತ್ತಿದೆ ಎಂದರು.

ಕರ್ನಾಟಕ ರಾಜ್ಯ ಹಜ್ ಸಮಿತಿ ಸದಸ್ಯ ಸಯ್ಯಿದ್ ಅಶ್ರಫ್ ತಂಙಳ್ ಅಸ್ಸಖಾಫ್ ಮದನಿ ಆದೂರು ದುಆ ನೆರವೇರಿಸಿದರು. ಜಿಲ್ಲಾ ವಕ್ಫ್ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಉಪಾಧ್ಯಕ್ಷ ಎ.ಕೆ. ಜಮಾಲ್, ಪ್ರಮುಖರಾದ ಎಸ್.ಎಂ. ರಶೀದ್, ಮೊಹಮ್ಮದ್ ಹನೀಫ್, ಬಿ.ಎಸ್. ಬಶೀರ್, ಸಿ.ಎಚ್.ಉಳ್ಳಾಲ್, ಮೊಹಮ್ಮದ್ ಹನೀಫ್ ಗೋಳ್ತಮಜಲು, ರಿಯಾಝ್ ಬಂದರು, ರಾಜ್ಯ ಹಜ್ ಸಮಿತಿ ಅಧಿಕಾರಿ ಅಕ್ರಂ, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕರ್ ಇದ್ದರು.

ಮಂಗಳೂರು ನಗರದ ಜೆಪ್ಪಿನಮೊಗರು ಯೆನೆಪೋಯ ಶಾಲಾ ಆವರಣದಲ್ಲಿ ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯಾತ್ರಾರ್ಥಿಗಳಿಗೆ ಲಸಿಕೆ ಹಾಕಲಾಯಿತು – ಪ್ರಜಾವಾಣಿ ಚಿತ್ರ
ಮಂಗಳೂರು ನಗರದ ಜೆಪ್ಪಿನಮೊಗರು ಯೆನೆಪೋಯ ಶಾಲಾ ಆವರಣದಲ್ಲಿ ಪವಿತ್ರ ಹಜ್ ಯಾತ್ರೆಗೆ ಹೊರಟಿರುವ ಯಾತ್ರಾರ್ಥಿಗಳಿಗೆ ಲಸಿಕೆ ಹಾಕಲಾಯಿತು – ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT