ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ 24ಕ್ಕೆ

Last Updated 21 ಮೇ 2022, 15:44 IST
ಅಕ್ಷರ ಗಾತ್ರ

ಮಂಗಳೂರು: ಈ ಬಾರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಿಂದ ಒಟ್ಟು 260 ಯಾತ್ರಿಕರು ಹಜ್ ಯಾತ್ರೆ ಕೈಗೊಳ್ಳಲಿದ್ದು, ಕರ್ನಾಟಕ ರಾಜ್ಯ ಹಜ್ ಸಮಿತಿಯು ಮೇ 24ರಂದು ಬೆಳಿಗ್ಗೆ 10 ಗಂಟೆಗೆ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿರುವ ಅಡ್ಕಾ ಸಮುದಾಯ ಭವನದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದು ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ತಿಳಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಹಜ್ ಯಾತ್ರೆಗೆ ತೆರಳುವವರಿಗೆ ಅಲ್ಲಿನ ನಿಯಮಗಳು, ವಿದೇಶ ಸಂಚಾರ ಪ್ರಕ್ರಿಯೆಗಳು, ಧಾರ್ಮಿಕ ವಿಧಿಗಳ ಬಗ್ಗೆ ಮಾಹಿತಿ ನೀಡಲಾಗುವುದು’ ಎಂದರು.

ಯೇನೆಪೋಯ ಅಬ್ದುಲ್ ಕುಂಞ ಉದ್ಘಾಟಿಸುವರು. ತರಬೇತಿ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಚಾಲನೆ ನೀಡುವರು. ಕರ್ನಾಟಕ ಹಜ್ ಸಮಿತಿ ಅಧ್ಯಕ್ಷ ಮುಹಮ್ಮದ್ ರೌಫುದ್ದೀನ್ ಕಚೇರಿವಾಲಾ ಅಧ್ಯಕ್ಷತೆ ವಹಿಸುವರು. ಶಾಸಕರಾದ ಯು.ಟಿ.ಖಾದರ್, ಡಾ.ವೈ.ಭರತ್ ಶೆಟ್ಟಿ ಭಾಗವಹಿಸುವರು. 2020–21ರಲ್ಲಿ ಕೋವಿಡ್ ಕಾರಣದಿಂದಾಗಿ ವಿದೇಶಿ ಯಾತ್ರಿಕರಿಗೆ ನಿರ್ಬಂಧ ಹೇರಲಾಗಿತ್ತು. ಈ ವರ್ಷ ಹಜ್ ಯಾತ್ರೆ ಆರಂಭಗೊಂಡಿರುವುದು ಸಮುದಾಯದಲ್ಲಿ ಸಂತೋಷ ತಂದಿದೆ ಎಂದರು.

ಜಿಲ್ಲಾ ವಕ್ಫ್‌ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಹಜ್ ಸಮಿತಿ ಸದಸ್ಯ ಎ.ಬಿ.ಮುಹಮ್ಮದ್ ಹನೀಫ್ ನಿಝಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT