ಶುಕ್ರವಾರ, ಜುಲೈ 1, 2022
27 °C
266 ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ

ಜಾಗ ದೊರೆತರೆ ಹಜ್ ಭವನಕ್ಕೆ ಶಂಕುಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಹಜ್ ಭವನ‌‌ ನಿರ್ಮಾಣಕ್ಕೆ ₹ 10 ಕೋಟಿ ಅನುದಾನ ಬಿಡುಗಡೆಯಾಗಿದೆ. ಸೂಕ್ತ ಜಾಗ ದೊರೆತಾಕ್ಷಣ ಹಜ್ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕರ್ನಾಟಕ ವಕ್ಫ್ ಮಂಡಳಿ ಅಧ್ಯಕ್ಷ ಎನ್‌ಕೆಎಂ ಶಾಫಿ ಸಅದಿ ಹೇಳಿದರು.

ಕರ್ನಾಟಕ ರಾಜ್ಯ ಹಜ್ ಸಮಿತಿಯ ಮೂಲಕ ದ.ಕ., ಉಡುಪಿ ಮತ್ತು ಕೊಡಗು ಜಿಲ್ಲೆಗಳಿಂದ ಯಾತ್ರೆ ಕೈಗೊಳ್ಳುವ 266 ಹಜ್ ಯಾತ್ರಿಕರಿಗೆ ಮಂಗಳವಾರ ಇಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸಲಾಗುತ್ತಿದೆ. ಮುಂದಿನ ವರ್ಷದ ಹಜ್ ಕಾರ್ಯಕ್ರಮಗಳು ಹಜ್ ಭವನದಲ್ಲಿ ನಡೆಯಲಿ ಎಂದು ಆಶಿಸಿದರು.

ಸಭಾ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಉದ್ಘಾಟಿಸಿದರು. ಬೈಕಂಪಾಡಿಯ ಮುಹಿಯ್ಯುದ್ದೀನ್ ಜುಮ್ಮಾ ಮಸೀದಿಯ ಖತೀಬ್ ಹಸನುಲ್ ಮದನಿ ದುಆಗೈದರು.

ಮಾಜಿ ಶಾಸಕ ಮೊಹಿಯುದ್ದೀನ್ ಬಾವ, ಸೆಂಟ್ರಲ್ ಮುಸ್ಲಿಂ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ. ಅಶ್ರಫ್, ಪುತ್ತುಬಾವ ಹಾಜಿ, ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ಕರ್ನಾಟಕ ಹಜ್ ಸಮಿತಿ ಸದಸ್ಯರಾದ ಖುಸ್ರೋ ಖುರೇಶಿ, ಎ.ಬಿ. ಮುಹಮ್ಮದ್ ಹನೀಫ್ ನಿಝಾಮಿ, ಮೊಹೀನ್ ಖಾನ್, ಚಾಂದಾ ಪಾಶಾ, ವಿದ್ವಾಂಸರಾದ ಡಾ. ಅಬ್ದುರ‌್ರಶೀದ್ ಝೈನಿ ಕಾಮಿಲ್ ಮತ್ತು ಯು.ಕೆ. ಅಬ್ದುಲ್ ಅಝೀಝ್ ದಾರಿಮಿ, ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರಾದ ಎ.ಕೆ. ಜಮಾಲ್, ಫಕೀರಬ್ಬ, ಮಾಜಿ‌ ಉಪಮೇಯರ್ ಬಶೀರ್ ಬೈಕಂಪಾಡಿ, ಉದ್ಯಮಿ ಬಿ.ಎ‌.ನಝೀರ್, ಸಿಎಂ‌‌ ಮುಸ್ತಫಾ, ಅಹ್ಮದ್ ಬಾವಾ ಪಡೀಲ್, ಬೈಕಂಪಾಡಿ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಸನ್ ಶಬೀರ್ ಇದ್ದರು‌.

ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಹಜ್ ಸಮಿತಿಯ ಮಾಜಿ ಸದಸ್ಯ ಕೆ.ಎಂ. ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಭಾಗವಹಿಸಿದ್ದರು. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಸ್ವಾಗತಿಸಿದರು. ಸೈದುದ್ದೀನ್ ಕಾರ್ಯಕ್ರಮ ನಿರೂಪಿಸಿದರು.

2020-2021ರಲ್ಲಿ ಕೋವಿಡ್ ಕಾರಣದಿಂದಾಗಿ ಯಾತ್ರಿಕರಿಗೆ ನಿರ್ಬಂಧ ಹೇರಲಾಗಿತ್ತು. ಈ ಬಾರಿ ಸೀಮಿತ ಸಂಖ್ಯೆಯ ಯಾತ್ರಿಕರಿಗೆ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಯಾತ್ರೆಗೆ ತೆರಳಲು ಅವಕಾಶ ಕಲ್ಪಿಸಿಕೊಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು