ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಾ. ಮುಲ್ಲರ್ ಕಾಲೇಜಿಗೆ ಕೋವಿಡ್ ಪ್ರಯೋಗಾಲಯ

Last Updated 19 ಮೇ 2020, 14:51 IST
ಅಕ್ಷರ ಗಾತ್ರ

ಮಂಗಳೂರು: ನಗರದ ಫಾದರ್‌ ಮುಲ್ಲರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಯೋಗಾಲಯವು ಎಸ್‌ಎಆರ್‌ಸ್‌-ಸಿಒವಿ–2 (ಕೋವಿಡ್ ರೋಗ ಹರಡುವ) ವೈರಸ್‌ ಪರೀಕ್ಷಿಸಲು ಐಸಿಎಂಆರ್‌ ಅನುಮೋದನೆ ನೀಡಿದೆ. ಕೋವಿಡ್-19 ಪರೀಕ್ಷೆಯನ್ನು ಪ್ರಾರಂಭಿಸಲು ಬೆಂಗಳೂರಿನ ನಿಮ್ಹಾನ್ಸ್ ಮಾರ್ಗದರ್ಶಿ ಕೇಂದ್ರದಿಂದ ತಯಾರಿಸಿದ ಪಟ್ಟಿಯಲ್ಲಿ ಸ್ಥಾನ ಪಡೆದ ಕಾಲೇಜುಗಳಲ್ಲಿ ಫಾದರ್ ಮುಲ್ಲರ್‌ ಒಂದಾಗಿದೆ.

ಸಂಸ್ಥೆಯ ಮೈಕ್ರೋಬಯೊಲಾಜಿ ವಿಭಾಗದ ಪ್ರಾಧ್ಯಾಪಕ ಡಾ. ಅನೂಪ್‌ಕುಮಾರ್ ಅವರು, ಈ ಉದ್ದೇಶಕಾಗಿ ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ತರಬೇತಿ ಪಡೆದಿದ್ದಾರೆ. ಕಾಲೇಜು ಪ್ರಯೋಗಾಲಯವು 2012 ರಿಂದ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತಾ ಮಂಡಳಿ (ಎನ್‌ಎಬಿಎಲ್‌)ಯ ಮಾನ್ಯತೆ ಪಡೆದಿದೆ.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಐಸೋಲೇಶನ್ ವಾರ್ಡ್ ಮತ್ತು ಸಾಕಷ್ಟು ವೆಂಟಿಲೇಟರ್‌ಗಳು, ಸಿಬ್ಬಂದಿಗಾಗಿ ಅಗತ್ಯ ಪಿಪಿಇ ಕಿಟ್‌ಗಳನ್ನು ತಯಾರಿಸಿದೆ. ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ನಿಗದಿಪಡಿಸಿದ ಶಿಷ್ಟಾಚಾರದ ಬಗ್ಗೆ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.

ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಉದಯ್ ಕುಮಾರ್ ಅವರು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಸ್ಪತ್ರೆಯ ಸೇವೆಯನ್ನು ಜಿಲ್ಲೆಗೆ ವಿಸ್ತರಿಸಲಾಗಿದೆ. ಗಂಟಲು ದ್ರವದ ಮಾದರಿ ಸಂಗ್ರಹಕ್ಕಾಗಿ ಮೀಸಲಾದ ಕಿಯೋಸ್ಕ್, ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಲಭ್ಯವಿದೆ. ಮಾದರಿಗಳನ್ನು ಸರಿಯಾದ ಕೋಲ್ಡ್ ಚೈನ್ ಮತ್ತು ಸುರಕ್ಷತಾ ಶಿಷ್ಟಾಚಾರಗಳ ಮೂಲಕ ಪ್ರಯೋಗಾಲಯಕ್ಕೆ ಸಾಗಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT