ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತಮ ಆಚಾರಗಳಿಂದ ಭಿನ್ನವಾಗಿ ಗುರುತಿಸಿಕೊಳ್ಳಿ: ಡಿ.ವೀರೇಂದ್ರ ಹೆಗ್ಗಡೆ

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ
Published 29 ಏಪ್ರಿಲ್ 2024, 4:09 IST
Last Updated 29 ಏಪ್ರಿಲ್ 2024, 4:09 IST
ಅಕ್ಷರ ಗಾತ್ರ

ಮೂಡುಬಿದಿರೆ: ಧಾರ್ಮಿಕ ಶ್ರದ್ಧೆ ಇದ್ದಾಗ ಮಾತ್ರ ದೇಶ ಉಳಿಯುತ್ತದೆ. ಜೈನ ಸಮಾಜದ ಜನರು ವೈಯಕ್ತಿಕ ಚಿಂತನೆ, ಉತ್ತಮ ಆಚಾರಗಳಿಂದ ಭಿನ್ನವಾಗಿ ಗುರುತಿಸಿಕೊಳ್ಳಬೇಕು. ಬಂಧನಗಳನ್ನು ಕಳಚಿಕೊಂಡು, ಕರ್ಮಗಳನ್ನು ಶುದ್ಧೀಕರಣ ಮಾಡಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ‌ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ಸಮುದಾಯದ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕೃಷಿಸಿರಿ ವೇದಿಕೆಯಲ್ಲಿ ಶನಿವಾರ ಭಗವಾನ್ ಮಹಾವೀರ ಸ್ವಾಮಿಜನ್ಮಕಲ್ಯಾಣ ಮಹೋತ್ಸವವದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಜೈನಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾತನಾಡಿ, ಸಾತ್ವಿಕ ಆಹಾರ, ಸ್ವಚ್ಛ ಚಿಂತನೆಯಿಂದ ಮಾನವ ಧರ್ಮವು ಸುಂದರಗೊಳ್ಳುತ್ತದೆ. ಸರಳವಾದ ಜೀವನಕ್ರಮ, ಕರ್ಮಗಳ ಬಂಧನಗಳಿಂದ ಮುಕ್ತಿ ಪಡೆದ ಮಹಾವೀರ ಸ್ವಾಮಿಯ ಜೀವನದ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಮಾತನಾಡಿ, ರಾಜಸ್ಥಾನದ ಜೈಪುರದಲ್ಲಿ ಸುಮಾರು 6ಲಕ್ಷ ವೆಚ್ಚದಲ್ಲಿ ತಯಾರಾದ 5 ಅಡಿಯ ಮಹಾವೀರ ಸ್ವಾಮಿಯ ಜಿನಬಿಂಬ ಹಾಲು ಬಿಳಿಯ ವರ್ಣ ಹೊಂದಿದ್ದು, ಇದು ಶಾಂತಿಯ ಸಂಕೇತವನ್ನು ಸೂಚಿಸುತ್ತದೆ. ಜೈನಧರ್ಮದ ಸಿರಿತನ ಇಮ್ಮಡಿಗೊಳಿಸುವ ವಾತಾವರಣ ಇಲ್ಲಿ ಸೃಷ್ಟಿಯಾಗಿದೆ ಎಂದರು.

ಹೊರನಾಡಿನ ಜಯಶ್ರೀ ಧರಣೇಂದ್ರಜೈನ್ ಮತ್ತು ಬಳಗದವರಿಂದ ಜಿನಭಕ್ತಿಗಾಯನ ನಡೆಯಿತು. ಉತ್ತರ ಭಾರತದಿಂದ ತರಿಸಿದ ಐದು ಅಡಿ ಎತ್ತರದ ಮಹಾವೀರ ಸ್ವಾಮಿ ಜಿನಬಿಂಬದ ಮೆರವಣಿಗೆ, ತೋರಣ ಮುಹೂರ್ತ, ದ್ರವ್ಯಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಮಹಾಮಂಗಳಾರತಿ ಹಮ್ಮಿಕೊಳ್ಳಲಾಯಿತು.

ಸಾಹಿತ್ಯಕ್ಷೇತ್ರದ ಸಾಧಕಿ ವೀಣಾ ಬಿ.ಆರ್.ಶೆಟ್ಟಿ, ಸಂಗೀತಕಲಾವಿದೆ ಜಯಶ್ರೀ ಡಿ.ಅವರನ್ನು ಸನ್ಮಾನಿಸಲಾಯಿತು.

ಮಾಜಿ ಸಚಿವ ಅಭಯಚಂದ್ರಜೈನ್, ಚೌಟರ ಅರಮನೆಯ ಕುಲದೀಪ ಎಂ., ಬಸದಿಗಳ ಮೊಕ್ತೇಸರರಾದ ಪಟ್ನಶೆಟ್ಟಿ ಸುಧೇಶ್ ಕುಮಾರ್, ಆನಡ್ಕ ದಿನೇಶ್‌ಕುಮಾರ್, ಆದರ್ಶ್‌ಜೈನ್‌, ಜೈನ್ ಮಿಲನ್ ರಾಜ್ಯ ಘಟಕದ ಅಧ್ಯಕ್ಷ ಯುವರಾಜ್ ಭಂಡಾರಿ, ಪಡ್ಯಾರಬೆಟ್ಟ ಜೀವಂಧರ್ ಕುಮಾರ್ ಭಾಗವಹಿಸಿದ್ದರು. ಮುನಿರಾಜ ರೆಂಜಾಳ ನಿರೂಪಿಸಿದರು.

ಆಳ್ವಾಸ್‌ ವಿದ್ಯಾಗಿರಿಯಲ್ಲಿ ಶನಿವಾರ ಭಗವಾನ್ ಮಹಾವೀರ ಮೂರ್ತಿಗೆ ದ್ರವ್ಯಾಭಿಷೇಕದ ಬಳಿಕ ಮಹಾಮಂಗಳಾರತಿ ನಡೆಯಿತು
ಆಳ್ವಾಸ್‌ ವಿದ್ಯಾಗಿರಿಯಲ್ಲಿ ಶನಿವಾರ ಭಗವಾನ್ ಮಹಾವೀರ ಮೂರ್ತಿಗೆ ದ್ರವ್ಯಾಭಿಷೇಕದ ಬಳಿಕ ಮಹಾಮಂಗಳಾರತಿ ನಡೆಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT