ಬೆಳ್ತಂಗಡಿ: ಗೋವುಗಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿದ್ದ ವಾಹನವನ್ನು ಕಳಿಯ ನ್ಯಾಯತರ್ಪು ಸಮೀಪದ ಜಾರಿಗೆಬೈಲು ಬಳಿ ಶುಕ್ರವಾರ ಬೆಳಿಗ್ಗೆ ತಡೆಹಿಡಿದು ದನಗಳನ್ನು ರಕ್ಷಿಸಲಾಗಿದೆ.

ತರಕಾರಿ ಸಾಗಿಸುವ ವಾಹನದಲ್ಲಿ ಹಿಂಸಾತ್ಮಕವಾಗಿ ಹಸುಗಳನ್ನು ಸಾಗಿಸುತ್ತಿದ್ದ ಮಾಹಿತಿ ಆಧರಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ವಾಹನವನ್ನು ಹಿಂಬಾಲಿಸಿ ತಡೆಹಿಡಿದರು.

ವಾಹನವನ್ನು ಯುವಕರು ಬೆನ್ನತ್ತಿರುವುದನ್ನು ಗಮನಿಸಿದ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ವಾಹನ, ಗೋವುಗಳನ್ನು ವಶಕ್ಕೆ ಪಡೆದುಕೊಂಡರು. ವಾಹನದಲ್ಲಿ 12 ದನಗಳು ಇದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.