‘ಮಂಗಳೂರಿನಲ್ಲಿ ಕಲಿಯುತ್ತಿರುವ 19 ವರ್ಷದ ವಿದ್ಯಾರ್ಥಿನಿಗೆ ಯುವಕನೊಬ್ಬ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ. ಇದರಿಂದ ಆಕೆ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು. ಕಾಲೇಜಿಗೆ ಹೋಗದೇ ಮನೆಯಲ್ಲೇ ಉಳಿದಿದ್ದಳು. ಪೋಷಕರು ವಿಚಾರಿಸಿದಾಗ, ಯುವಕ ನಿತ್ಯವೂ ವಾಟ್ಸ್ ಆ್ಯಪ್‌ನಲ್ಲಿ ತನ್ನ ಮರ್ಮಾಂಗದ ಚಿತ್ರವನ್ನು ಕಳುಹಿಸಿ ಕಿರುಕುಳ ನೀಡುತ್ತಿರುವ ಬಗ್ಗೆ ತಿಳಿಸಿದ್ದಳು.’